ಉಡುಪಿ: ಬಸ್ಸಿಗೆ ಢಿಕ್ಕಿ ಹೊಡೆ ಲಾರಿ, ಓರ್ವ ವಿದ್ಯಾರ್ಥಿ ಗಂಭೀರ
ಕುಂದಾಪುರದಲ್ಲಿ ಬಸ್ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ. ಈ ಘಟನೆ ತಲ್ಲೂರು ಪ್ರವಾಸಿ ಹೋಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ಯಲ್ಲಿ ನಡೆದಿದೆ. ಅಪಘಾತದಿಂದಾಗಿ ಬಸ್ಸಿನಲ್ಲಿದ್ದ ಹಲವು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಬೈಂದೂರುನಿಂದ ಕುಂದಾಪುರದ ಕಡೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ಬಸ್ ಹಿಂದಿನಿಂದ ಬಂದು ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆ ರಭಸಕ್ಕೆ ಬಸ್ಸಿನಲ್ಲಿದ್ದ ಓರ್ವ ವಿದ್ಯಾರ್ಥಿಗೆ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳ ದಾಳಿ, ಸ್ವಲ್ಪದರಲ್ಲೇ ಪಾರಾದ ಬಾಲಕಿ, ವಿಡಿಯೋ ಇಲ್ಲಿದೆ ನೋಡಿ
ವಿದ್ಯಾರ್ಥಿಯನ್ನು ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಸ್ಕೂಲ್ನ ವಿದ್ಯಾರ್ಥಿ ಪ್ರಸಾದ್ ಎಂದು ಹೇಳಲಾಗಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಬಗ್ಗೆ ತನಿಖೆ ನಡೆಸಲು ಕುಂದಾಪುರ ನಗರ ಪೊಲೀಸ್ ಠಾಣೆ ದೂರು ನೀಡಲಾಗಿದೆ.