ಉಡುಪಿ: ಹಾಲು ಮಾರಾಟದ ಅಂಗಡಿಗೆ ನುಗ್ಗಿ, ನಗದು ದೋಚಿದ ಕಳ್ಳ
ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಉಡುಪಿಯ ಅಂಬಲಪಾಡಿ ಬೈಪಾಸ್‌ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ಮಧ್ಯರಾತ್ರಿ ಸುಮಾರಿಗೆ ನುಗ್ಗಿದ ಕಳ್ಳನೋರ್ವ ಅಂಗಡಿಯಲ್ಲಿದ್ದ ನಗದು ದೋಚಿ ಪರಾರಿಯಾಗಿದ್ದಾನೆ. ಈತನ ಕೈಚಳಕದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು ಡಿಸ್ಟ್ರಿಬ್ಯೂಟರ್ ಸೆಂಟರ್‌ನ ಬೀಗ ಮುರಿದು ರಾತ್ರಿ 11:30 ಕ್ಕೆ ನುಗ್ಗಿರುವ ಕಳ್ಳನೋರ್ವ 35 ಸಾವಿರ ರೂಪಾಯಿ ಹಣವನ್ನು ದೋಚಿದ್ದಾನೆ. ಕಳ್ಳನ ಕೈಚಳಕ ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.