Published On: Mon, Aug 12th, 2024

ಬಂಟ್ವಾಳ : ‘ಕೃಷ್ಣ ಕೃಷ್ಣ ಶ್ರೀ ಕೃಷ್ಣಾ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ರಿ. ಇದರ ಆಶ್ರಯದಲ್ಲಿ ಕುಲಾಲ ಸೇವಾದಳದ ವತಿಯಿಂದ ಸೆಪ್ಟಂಬರ್ 1ರಂದು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯುವ ಕೃಷ್ಣ ಕೃಷ್ಣ ಶ್ರೀ ಕೃಷ್ಣ – ಸೀಸನ್ 2 ಇದರ ಆಮಂತ್ರಣ ಪತ್ರಿಕೆಯು ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕೃಷ್ಣ ಕೃಷ್ಣ ಶ್ರೀ ಕೃಷ್ಣ – ಸೀಸನ್ 2 ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ.ರವರು ಬಿಡುಗಡೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ರಮೇಶ್ ಸಂಚಯಗಿರಿ, ಕೋಶಾಧಿಕಾರಿ ಸೋಮನಾಥ ಸಾಲ್ಯಾನ್, ದಳಪತಿ ಗಣೇಶ್ ಕುಲಾಲ್ ಬೆದ್ರಗುಡ್ಡೆ, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter