ಮಂಗಳೂರು: ಹಳೆ ದ್ವೇಷಕ್ಕೆ ರೌಡಿಶೀಟರ್ ಸಮೀರ್ನನ್ನು ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ಮಾಡಿದ ದುಷ್ಕರ್ಮಿಗಳು
ದಕ್ಷಿಣ ಕನ್ನಡದಲ್ಲಿ ರೌಡಿ ರೌಡಿಶೀಟರ್ ಹತ್ಯೆ ಮಾಡಲಾಗಿದೆ. ಮಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಲಾಗಿದ್ದು, ಮಂಗಳೂರು ಹೊರವಲಯದ ಕಲ್ಲಾಪು ಎಂಬಲ್ಲಿ ಈ ಘಟನೆ ನಡೆದಿದೆ. ಉಳ್ಳಾಲದ ಕಡಪ್ಪಾರ ಸಮೀರ್ ಎಂಬ ರೌಡಿಶೀಟರ್ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಇಲಿಯಾಸ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಸಮೀರ್ ತನ್ನ ತಾಯಿ ಜತೆ ಹೋಟೆಲ್ಗೆ ಊಟಕ್ಕೆ ಬಂದಿದ್ದಾಗ ಸಮೀರ್ ಕೊಲೆ ಮಾಡಲಾಗಿದೆ. ಇನ್ನು ಸಮೀರ್ನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಾರದ ಹಿಂದೆಯಷ್ಟೇ ಜೈಲಿನಿಂದ ಹೊರ ಬಂದಿದ್ದ ಸಮೀರ್ನ್ನು ಹಳೆಯ ದ್ವೇಷದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಸಮೀರ್ ಊಟ ಮಾಡಿಕೊಂಡು ಹೊರ ಬರುತ್ತಿದ್ದಂತೆ ದುಷ್ಕರ್ಮಿಗಳ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಮಾರಕಾಸ್ತ್ರಗಳಿಂದ ಕಡಿದು ಅಲ್ಲಿಂದ ಪರಾರಿಯಾಗಿದ್ದಾರೆ. ಇತ್ತೀಚೆಗೆ ಮಂಗಳೂರು ಕಾರಾಗೃಹ ದಲ್ಲಿ ಸಮೀರ್ ಮೇಲೆ ಸಹ ಕೈದಿಗಳಿಂದ ದಾಳಿ ನಡೆದಿತ್ತು ಎಂದು ಹೇಳಲಾಗಿದೆ. ವಾರದ ಹಿಂದೆ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿದ್ದಾನೆ. ಇದೀಗ ಈ ಬಗ್ಗೆ ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.