ದಕ್ಷಿಣ ಕನ್ನಡದಲ್ಲಿ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೀತಿಯ ವಿಚಾರವಾಗಿ ಹತ್ಯೆ ಮಾಡಲು ಮುಂದಾಗಿದ್ದಾನೆ. ಜಿಲ್ಲೆಯ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ತುಮಕೂರು ಮೂಲದ ಮಂಜುನಾಥ್ ಎಂಬ ಯುವಕ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಇದೀಗ ಆತನನ್ನು ಮೂಡಬಿದಿರೆ ಪೋಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿಯನ್ನು ಪಿಯುಸಿ ಓದುತ್ತಿದ್ದ ಹುಡುಗಿ ಎಂದು ಹೇಳಲಾಗಿದೆ. ಆತನ ಕ್ಲಾಸ್​​ನಲ್ಲೇ ಓದುತ್ತಿದ್ದ ತುಮಕೂರು ಮೂಲದ ಯುವತಿಯನ್ನೇ ಪ್ರೀತಿಸುತ್ತಿದ್ದ ಎಂದು ಹೇಳಲಾಗಿದೆ. ಇಬ್ಬರು ಕೂಡ ಜತೆಯಾಗಿ ವಿದ್ಯಾಭ್ಯಾಸ ನಡೆಸಿದ್ದ ಕಾರಣ ಇಬ್ಬರ ನಡುವೆ ಪ್ರೀತಿ ಹುಟ್ಟಿದೆ. ಕಾಲೇಜು ತೊರೆದು ಮನೆಗೆ ತೆರಳಿದ್ದ ಮಂಜುನಾಥ್ ಆಕೆ ತನ್ನ ಮೆಸೇಜ್​​​​ಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡು ತುಮಕೂರಿನಿಂದ ಮೂಡಬಿದರೆಗೆ ಬಂದಿದ್ದಾನೆ. ಈ ವೇಳೆ ಯುವತಿಯನ್ನು ಭೇಟಿ ಮಾಡಲು ಯತ್ನಿಸಿದ್ದಾನೆ. ಆದರೆ ಭೇಟಿಯಾಗಲು ಸಾಧ್ಯವಾಗಲಿಲ್ಲ. ಇದರಿಂದ ಸಿಟ್ಟಿಗೇರಿದ ಯುವಕ ನಿನ್ನೆ ತರಗತಿಗೆ ತೆರಳಿ ಯುವತಿಗೆ ಕತ್ತರಿಯಿಂದ ಇರಿದಿದ್ದಾನೆ.

ಇದನ್ನೂ ಓದಿ: ಬಂಟ್ವಾಳ: ಕರಿಯಂಗಳ ಜನರಿಗೆ ಕಿರುಕುಳ ನೀಡುತ್ತಿರುವ ಉಸ್ಮಾನ್, ಮಗನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಈ ಘಟನೆಯಲ್ಲಿ ಯುವತಿಗೆ ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಆಳ್ವಾಸ್​​​​ ಕಾಲೇಜಿನ ಇತರ ವಿದ್ಯಾರ್ಥಿಗಳು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಯುವಕನ‌ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ.

By suddi9

Leave a Reply

Your email address will not be published. Required fields are marked *