ನಾನು ಒಂದು ರೂಪಾಯಿ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಶಾಸಕ ಪೂಂಜಾ ಮಾರಿಗುಡಿಯಲ್ಲಿ ಪ್ರಮಾಣ
![](https://www.suddi9.com/wp-content/uploads/2024/08/WhatsApp-Image-2024-08-14-at-12.22.38-PM-650x357.jpeg)
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದರು. ಇದೀಗ ಈ ಆರೋಪ ಸುಳ್ಳು ಎಂದು ಶಾಸಕ ಹರೀಶ್ ಪೂಂಜಾ ಮಾರಿಗುಡಿಯಲ್ಲಿ ಪ್ರಮಾಣ ಮಾಡಿದ್ದಾರೆ. ನಾನು ಒಂದು ರೂಪಾಯಿ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ ಎಂದು ಪ್ರಮಾಣ ಮಾಡಿದ್ದಾರೆ. ಒಂದು ವೇಳೆ ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ ಎಂದು ಪ್ರಮಾಣ ಮಾಡಿದ್ದಾರೆ. ಶಾಸಕ ಹರೀಶ್ ಪೂಂಜಾ ಇಂದು ಬೆಳಿಗ್ಗೆ ಬೆಳ್ತಂಗಡಿ ಮಾರಿಗುಡಿಯಲ್ಲಿ ಭ್ರಷ್ಟಾಚಾರ ನಡೆಸಿಲ್ಲ ಎಂದು ಪ್ರಮಾಣ ಮಾಡಿದ್ದಾರೆ. ಈ ವೇಳೆ ಶಾಸಕರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ತೆಂಗಿನಕಾಯಿ ಒಡೆದಿದ್ದಾರೆ.
ಇನ್ನು ನನ್ನ ಮೇಲೆ ಆರೋಪಗಳನ್ನು ಮಾಡುತ್ತಿರುವ ರಕ್ಷಿತ್ ಶಿವರಾಂ ಸೇರಿದಂತೆ ಎಲ್ಲರಿಗೂ ತಕ್ಕ ಶಿಕ್ಷೆಯನ್ನು ಆ ದೇವಿಯೇ ನೀಡಬೇಕು ಎಂದು ಹೇಳಿದ್ದಾರೆ. ಈ ವೇಳೆ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಇದೀಗ ಈ ವಿಚಾರವಾಗಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹಾಗೂ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ನಡುವೆ ಜಿದ್ದಾಜಿದ್ದಿ ಉಂಟಾಗಿದೆ.
ಇದನ್ನೂ ಓದಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ‘ಆಟಿ ತಿಂಗಳ ತಿಂಡಿ ತಿನಿಸು ಔಷಧಿಯುಕ್ತ’
ಶಾಸಕ ಹರೀಶ್ ಪೂಂಜಾ ಅವರು ಬೆಳ್ತಂಗಡಿ ಪ್ರವಾಸಿ ಬಂಗಲೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಆರೋಪಿಸಿದರು. ಹರೀಶ್ ಪೂಂಜಾ ಕಮಿಷನ್ ಪಡೆದು ಭ್ರಷ್ಟಾಚಾರ ಮಾಡಿದ್ದಾರೆ. ಬೆಳ್ತಂಗಡಿ ಪ್ರವಾಸಿ ಮಂದಿರ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲೂ ಶಾಸಕರಿಗೆ 3 ಕೋಟಿ ಕಿಕ್ ಬ್ಯಾಕ್ ಮಾಡಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ SIT ತನಿಖೆಗೆ ನಡೆಸಬೇಕು ಎಂದು ರಕ್ಷಿತ್ ಶಿವರಾಂ ಆರೋಪಿಸಿದ್ದಾರೆ
ಬೆಳ್ತಂಗಡಿ ಪ್ರವಾಸಿ ಮಂದಿರ 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ, ಮಾರ್ಚ್ 28, 2023ರಲ್ಲಿ ಉದ್ಘಾಟನೆಯಾಗಿದೆ, ಆದರೆ ಕಾಮಗಾರಿ ಮುಗಿದ ಮೇಲೆ ವರ್ಕ್ ಆರ್ಡರ್ ಆಗಿದೆ. ಇದರ ಹಣವನ್ನು ಶಾಸಕರು ಚುನಾವಣೆ ಪ್ರಚಾರಕ್ಕೆ ಬಳಕೆ ಮಾಡಿದ್ದಾರೆ. ಜತೆಗೆ ಕಾಮಗಾರಿ ಪೂರ್ಣಗೊಂಡ ನಂತರವು 2 ಕೋಟಿ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ಆಗಬೇಕು. ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಿದ್ದು, SIT ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.