ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಗೆ ಬರುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅಂದಹಾಗೆ, ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಮಾಡಿ ಅಲ್ಲಿ ಮೂವರು ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದರು. ಈ ಘಟನೆಗೆ ಸಂಬಂಧ ಪಟ್ಟಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ ಈ ಪೈಕಿ ಇಬ್ಬರು ಆರೋಪಿಗಳ ಬಂಧನವಾಗಿದ್ದು ಆದರೆ ಪ್ರಮುಖ ಆರೋಪಿಯೂ ತಲೆ ಮರೆಸಿಕೊಂಡಿದ್ದನು.
ಇದನ್ನೂ ಓದಿ: ನಾನು ಒಂದು ರೂಪಾಯಿ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಶಾಸಕ ಪೂಂಜಾ ಮಾರಿಗುಡಿಯಲ್ಲಿ ಪ್ರಮಾಣ
ಈ ಪ್ರಮುಖ ಆರೋಪಿ ಮಹಮ್ಮದ್ ಅಫೀಕ್ ನ ಬಂಧನಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಕಾರ್ಯ ಪ್ರವೃತ್ತರಾದ ಪೊಲೀಸ್ ತಂಡವು ಪ್ರಮುಖ ಆರೋಪಿಯಾಗಿದ್ದ (19) ಅಫೀಕ್ ಯಾನೆ ಮಹಮ್ಮದ್ ಅಫೀಕ್ ನನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಮಹಮ್ಮದ್ ಫೈಝಲ್ ಹಾಗು ಲಿಖೇಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಇಬ್ಬರೂ ಕೂಡ ಜಾಮೀನು ಪಡೆದುಕೊಂಡು ಹೊರ ಬಂದಿದ್ದಾರೆ.