ಬಾಂಗ್ಲಾದಂತೆ ಭಾರತದಲ್ಲೂ ಆಗಬಹುದು ಈಗಲೇ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು: ಪೇಜಾವರ ಶ್ರೀ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧ ಪಟ್ಟಂತೆ ನೆನ್ನೆ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಕಳವಳ ವ್ಯಕ್ತಪಡಿಸಿದ್ದರು. ಇದೀಗ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪತ್ರಿಕ್ರಿಯೆ ನೀಡಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ಬಹು ಖೇದವಾಗಿದೆ. ಭಾರತದ ಹಿಂದುಗಳು ಈ ಬಗ್ಗೆ ಕಳವಳಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಹಿಂದುಗಳ ಮೇಲಿನ ಹಲ್ಲೆಗಳ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಮಾತನಾಡುವ ಪ್ರವೃತ್ತಿ ನಮ್ಮ ದೇಶದಲ್ಲೂ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜ ಜಾಗೃತವಾಗಬೇಕು, ಯಾವುದೇ ಸರ್ಕಾರವನ್ನೂ ಆಶ್ರಯಿಸುವ ಪರಿಸ್ಥಿತಿ ಈಗಿಲ್ಲ ಹೀಗಾಗಿ ದೇವರಿಗೆ ಶರಣಾಗಬೇಕು. ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುವಂತೆ ಪ್ರಾರ್ಥಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: ಭಾರತದಲ್ಲಿ ಅಲ್ಪಸಂಖ್ಯಾತರು ಭಯವಿಲ್ಲದೆ ಬದುಕುತ್ತಿದ್ದಾರೆ, ಆದರೆ ಅಲ್ಲಿ ಹಿಂದೂಗಳು…. ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕಳವಳ
ಇನ್ನು ನೆನ್ನೆ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಕೂಡ ವಿಡಿಯೋದ ಮೂಲಕ ಮಾತನಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನರಮೇಧ ದಿಗ್ಭ್ರಮೆ ಉಂಟು ಮಾಡಿದೆ. ಭಾರತದಲ್ಲಿ ಅಲ್ಪಸಂಖ್ಯಾತರು ಯಾವುದೇ ಭಯವಿಲ್ಲದೆ ನಿರ್ಭೀತಿಯಿಂದ ಬದುಕುತ್ತಾರೆ. ಅದೇ ಪ್ರಪಂಚದ ಬೇರೆ ಕಡೆ ಹಿಂದೂ ಗಳ ಪರಿಸ್ಥಿತಿ ಅತ್ಯಂತ ಭಯಾನಕವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.