ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ
ಬಂಟ್ವಾಳ:ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನೀಡಲಾಗುವ ಸಾಧನಾ ಪ್ರಶಸ್ತಿಗೆ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘವು ಆಯ್ಕೆಯಾಗಿದ್ದು, 2023-2024 ನೇ ಸಾಲಿನ ಮಹಾಸಭೆ ಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕು.ಮಮತಾ ಜಿ.ಅವರು ಸ್ವೀಕರಿಸಿದರು.
ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಈ ಸಂದರ್ಭ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ, ಎಸ್ ಬಿ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ , ಸದಾಶಿವ ಉಳ್ಳಾಲ, ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್ ಎನ್ ರಮೇಶ್
ಹಾಗೂ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ ಹಾಗೂ ಜಯಶಂಕರ್ ಕಾನ್ಸಾಲೆ ಹಾಗೂ ಮಹಾಮಂಡಲದ ಸಿ.ಇ. ಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು