ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ
ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ಬಿ.ಸಿ.ರೋಡ್‌ನ ಗಾಣದಪಡ್ಪುದ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿಯವರು ನಾಗಬೆರ್ಮೆರೆನ ಪಾಡ್ದನದೊಂದಿಗೆ ಸ್ವಸ್ತಿಕವನ್ನು ಇಟ್ಟು, ದೀವಟಿಗೆ ಉರಿಸಿ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಧ್ಯಕ್ಷತೆ ವಹಿಸಿದ್ದರು.

ತುಳುನಾಡಿನ ಗುತ್ತುಮನೆ ಮಾದರಿಯ ಸಭಾಮಂಟಪದಲ್ಲಿ ಆಯೋಜಿಸಲಾಗಿತ್ತು. ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ತಂಬಿಗೆಯಲ್ಲಿ ನೀರು, ಓಲೆಬೆಲ್ಲ, ವೀಳ್ಯೆದೆಲೆ-ಅಡಿಕೆ ನೀಡಿ ಅತಿಥಿಗಳನ್ನು ಸ್ವಾಗತಿಸಲಾಯಿತು.
ಮುಖ್ಯ ಅತಿಥಿಯಾದ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್ ಅವರು ಮಾತನಾಡಿ, ಸಮಾಜಮುಖಿ ಸೇವೆ ಸಲ್ಲಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಪಡೆದೆರುವ ಸಂಸ್ಥೆ ಯುವವಾಹಿನಿಯ ಕಾರ್ಯಗಳು ಶ್ಲಾಘನೀಯ ಎಂದರು.
ಅತಿಥಿಯಾಗಿ ಭಾಗವಹಿಸಿದ್ದ ನಮ್ಮಕುಡ್ಲ ಚಾನಲ್‌ನ ನಿರ್ದೇಶಕ ಲೀಲಾಕ್ಷ ಬಿ ಕರ್ಕೇರ
ಹಾಗೂ ದಿನೇಶ್ ಸುವರ್ಣ ರಾಯಿಯವರು ಚೆನ್ನೆಮಣೆ ಆಡಿ ಚೆನ್ನೆಮಣೆ ಸ್ಪರ್ಧೆಗೆ ಚಾಲನೆ ನೀಡಿದರು.
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಾರ್ಯದರ್ಶಿ ಚೇತನ್ ಮುಂಡಾಜೆ, ಸಂಚಾಲಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಸಂಚಾಲಕ ನವೀನ್ ಪೂಜಾರಿ ಸ್ವಾಗತಿಸಿದರು.