ಮಂಗಳೂರು: ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ, ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ
ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ ಮಾಡಲಾಗುತ್ತಿದೆ. 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲಾಡಳಿತದಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಮಾಡಲಾಗಿತ್ತು. ಕಾರ್ಯಕ್ರಮವನ್ನು ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಿದರು
ಇನ್ನು ಈ ಸಂದರ್ಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ತೆರೆದ ವಾಹನದಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಪೊಲೀಸ್, ಅಗ್ನಿಶಾಮಕ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಪಥಸಂಚನ ನಡೆಸಲಾಗಿತ್ತು.
ಇದನ್ನೂ ಓದಿ: ಸ್ವಾತಂತ್ರ್ಯದಿಂದ ಭಾರತ ಎಂಬ ಶಬ್ದಕ್ಕೆ ವ್ಯಕ್ತಿತ್ವ ಬಂದಿದೆ: ಡಾ.ಡಿ.ವಿರೇಂದ್ರ ಹೆಗ್ಗಡೆ
ಕಾರ್ಯಕ್ರಮದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ, ಪೊಲೀಸ್ ಕಮೀಷನರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.