ಉಡುಪಿ: ಗ್ಯಾರಂಟಿ ಯೋಜನೆ ಅಂತ್ಯ ಆಗುತ್ತಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳೋದೇನು?
78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ಯಾರಂಟಿ ಬಗ್ಗೆ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಷರತ್ತು, ರದ್ದತಿ ಬಗ್ಗೆ ಚರ್ಚೆಯಾಗುತ್ತಿದೆ. ಇದು ಯಾವುದು ನಿಜವಲ್ಲ, ಸರ್ಕಾರ ಈ ಕ್ರಮಕ್ಕೆ ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಪುನರ್ ಪರಿಶೀಲನೆ ಕೂಡ ಮಾಡಲ್ಲ ಎಂದು ಹೇಳಿದರು.
ಚುನಾವಣೆಗಿಂತ ಮೊದಲು ಕೊಟ್ಟ ಭರವಸೆ ಜಾರಿಯಲ್ಲಿ ಇರುತ್ತದೆ ಐದು ಗ್ಯಾರಂಟಿಗಳು ಮೊದಲು ಹೇಗಿತ್ತು ಎಲ್ಲವೂ ಮುಂದುವರಿಯುತ್ತದೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಯಾರು ಅನ್ಯತಾ ವ್ಯಾಖ್ಯಾನಿಸಬಾರದು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ, ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ
ಇನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಈ ಪರಿಷ್ಕರಣೆ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಪತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಪರಿಷ್ಕರಣೆ ಬಗ್ಗೆ ಜಾರಕಿಹೊಳಿಯವರು ಮಾತನಾಡಿರಲಿಕ್ಕಿಲ್ಲ. ಇದು ಕ್ಯಾಬಿನೆಟ್ನ ಒಕ್ಕೋರೆಲ್ಲ ಧ್ವನಿ ಒಂದೇ ಗ್ಯಾರಂಟಿ ಯೋಜನೆ ಮುಂದುವರಿಯಬೇಕು ಎಂದು ಹೇಳಿದರು.