ಮಂಗಳೂರು : ಆಟಿಕೂಟದಲ್ಲಿ ಮಹಿಳೆಯ ದೈವನರ್ತನ, ಮಂಜುನಾಥ ಸನ್ನಿಧಾನದಲ್ಲಿ ಕ್ಷಮೆಯಾಚಿಸಿದ ಮಹಿಳೆ
ತುಳುನಾಡಿನ ಜನರ ನಂಬಿಕೆ ಹಾಗೂ ದೈವಾರಾಧನೆಗೆ ಅಪಚಾರ ಮಾಡಿದ್ದ ಮಹಿಳೆಯೊಬ್ಬರು ಬುಧವಾರ ಕದ್ರಿ ದೇವಸ್ಥಾನಕ್ಕೆ ಆಗಮಿಸಿ ಕಣ್ಣೀರಿಟ್ಟು ದೇವರ ಮುಂದೆ ಕ್ಷಮೆಯಾಚಿಸಿದ್ದಾರೆ.
ಮಂಗಳೂರಿನ ಯೆಯ್ಯಾಡಿ ಬಳಿ ನಡೆದ ಕಾರ್ಯಕ್ರದಲ್ಲಿ ಕವಿತಾ ರಾವ್ ದೈವ ನರ್ತನ ಮಾಡಿದ್ದರು. ಆಟಿಡೊಂಜಿ ದಿನ ಎಂಬ ಕಾರ್ಯಕ್ರಮದಲ್ಲಿ ಕವಿತಾ ರಾವ್ ದೈವ ನರ್ತನ ಮಾಡಿರುವುದು ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋವು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಆ ಬಳಿಕ ಕಾರ್ಯಕ್ರಮ ಆಯೋಜಕರನ್ನು ಕರೆ ಮಾಡಿ ಜನರು ತರಾಟೆಗೆ ತೆಗೆದುಕೊಂಡಿದ್ದರು.
ಮಹಿಳೆ ದೈವದ ಎದುರು ನಿಂತು ಕ್ಷಮೆಯಾಚಿಸುವಂತೆ ಅಗ್ರಹಿಸಲಾಗಿತ್ತು. ಹೀಗಾಗಿ ದೈವ ನರ್ತನ ಮಾಡಿದ ಮಹಿಳೆ ಕವಿತಾ ರಾವ್ ಅವರು, ಕದ್ರಿ ಮಂಜುನಾಥ ಸ್ವಾಮಿಗೆ ಮಂಡಿಯೂರಿ ಮಹಿಳೆ ಕ್ಷಮೆಯಾಚಿಸಿದ್ದಾರೆ. ಹೌದು, ದೈವಾರಾಧಕ ದಯಾನಂದ ಕತ್ತಲ್ ಸಾರ್ ಜೊತೆಗೆ ಆಗಮಿಸಿದ ಕವಿತಾ ರಾವ್ ಕ್ಷಮೆ ಕೇಳಲು ತೆರಳಿದ್ದಾರೆ.
ಇದನ್ನೂ ಓದಿ: ಆಟಿದ ಕೂಟ ಕಾರ್ಯಕ್ರಮದಲ್ಲಿ ತಳುನಾಡಿನ ದೈವಗಳಿಗೆ ಅವಮಾನ ಮಾಡಿದ ಇಬ್ಬರು ಮಹಿಳೆಯರು
ಈ ವೇಳೆಯಲ್ಲಿ ದೇವರಿಗೆ ತಪ್ಪು ಕಾಣಿಕೆಯನ್ನೂ ಕೂಡ ಅವರು ಸಲ್ಲಿಕೆ ಮಾಡಿದ್ದು, ರುದ್ರಾಭಿಷೇಕ ಹಾಗೂ ತಂಬಿಲ ಸೇವೆ ಸಲ್ಲಿಸುವುದಾಗಿ ಹೇಳಿ ದೇವರಲ್ಲಿ ಕ್ಷಮೆಯಾಚನೆ ಮಾಡಿದ್ದಾರೆ. ಕಲ್ಲುರ್ಟಿ ದೈವಕ್ಕೆ ಕೋಲ ಹಾಗೂ ಚಂಡಿಕಾಯಾಗ ಕೊಡುವುದಾಗಿ ಪ್ರಾರ್ಥಿಸಿಕೊಂಡಿದ್ದಾರೆ. ಮಂಜುನಾಥ ದೇವರ ಸನ್ನಿಧಿಯಲ್ಲಿ ತಪ್ಪಾಯ್ತು ಎಂದು ಕವಿತಾ ರಾವ್ ಗಳಗಳನೆ ಅತ್ತುಬಿಟ್ಟಿದ್ದಾರೆ.
ನಿತ್ಯ ದೈವಗಳ ಆರಾಧನೆ, ದೇವರ ಪೂಜೆ ಮಾಡಿಕೊಂಡು ಬಂದವಳು ನಾನು. ಆದರೆ ಸಂಗೀತ ಮತ್ತು ನೃತ್ಯದಲ್ಲಿ ಅಪಾರ ಆಸಕ್ತಿ ಕಾರಣದಿಂದ ತಪ್ಪಾಗಿದೆ. ಮಂಜುನಾಥನ ಬಳಿ ಕ್ಷಮೆ ಕೇಳಿ ತಪ್ಪು ಕಾಣಿಕೆ ಹಾಕಿದ್ದೇನೆ. ಇನ್ನು ಮುಂದೆ ಯಾರೂ ದಯವಿಟ್ಟು ಇಂಥಹ ತಪ್ಪು ಮಾಡಲೇ ಬೇಡಿ ಎಂದು ಕವಿತಾ ರಾವ್ ಕ್ಷಮೆ ಕೇಳಿಕೊಂಡಿದ್ದಾರೆ.