ಸಿದ್ದಕಟ್ಟೆ ಪ್ರಾ. ಕೃ. ಪ. ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ನಿಂದ ಪ್ರಶಸ್ತಿ
ಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2023-24 ನೇ ಸಾಲಿನಲ್ಲಿ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸದಸ್ಯರಿಗೆ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದಕ್ಕಾಗಿ ದ.ಕ. ಜಿಲ್ಲಾ ಕೇಂದ್ರ ಬ್ಯಾಂಕ್ ವತಿಯಿಂದ ಬ್ಯಾಂಕ್ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಯವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ. ಎನ್. ರಾಜೇಂದ್ರ ಕುಮಾರ್, ನಿರ್ದೇಶಕ ಟಿ. ಜಿ. ರಾಜರಾಮ್ ಭಟ್,ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್. ಏನ್.ಮತ್ತಿತರರು ಉಪಸ್ಥಿತರಿದ್ದರು