ಹವಾಮಾನ ಆಧಾರಿತ ಬೆಳೆ ವಿಮೆ ಅವಧಿ ಆ. 25 ವರೆಗೆ ವಿಸ್ತರಣೆ
ಬಂಟ್ವಾಳ:2024 – 25 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಪಾವತಿಸುವ ದಿನಾಂಕ ವನ್ನು ಆ. 25 ರವರೆಗೆ ವಿಸ್ತರಿಸಿ ತೋಟಗಾರಿಕೆ ಇಲಾಖೆ ಆದೇಶಿಸಿದೆ ಎಂದು ಸಿದ್ದಕಟ್ಟೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ರೈತರ ಸಮಸ್ಯೆಗಳನ್ನು ಅರಿತುಕೊಂಡು ಕೇಂದ್ರ ಕೃಷಿ ಸಚಿವರಿಗೆ ಪತ್ರದ ಮೂಲಕ ಮನವರಿಕೆ ಮಾಡಿ ವಿನಂತಿಸಲಾಗಿತ್ತು.ಇದಕ್ಕೆ ಸ್ಪಂದಿಸಿ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಿ ಅವಧಿಯನ್ನು ವಿಸ್ತರಣೆಗೆ ಸಹಕರಿಸಿದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ರೈತರ ಮತ್ತು ಸಹಕಾರ ಸಂಘಗಳ ಪರವಾಗಿ ಸಿದ್ದಕಟ್ಟೆ ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಕ್ರತಜ್ಞತೆ ಸಲ್ಲಿಸಿದ್ದಾರೆ.
ಬಾಕಿ ಉಳಿದಿರುವ ರೈತರು ವಿಮೆ ಕಂತನ್ನು ಆ. 25 ರೊಳಗಾಗಿ ಸಂಬಂಧ ಪಟ್ಟ ತಮ್ಮ ಕಾರ್ಯ ವ್ಯಾಪ್ತಿಯ ಪ್ರಾರ್ಥಮಿಕ ಸಹಕಾರ ಸಂಘ ಗಳಲ್ಲಿ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯುವಂತೆ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.