ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ತಿರಂಗಾ ಯಾತ್ರೆ
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿ.ಸಿ. ರೋಡಿನಲ್ಲಿರುವ ಬಿಜೆಪಿ ಕಛೇರಿಯಲ್ಲಿ ನಡೆಯಿತು.
ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಚೆನ್ನಪ್ಪ ಆರ್ ಕೋಟ್ಯಾನ್ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಪ್ರಮುಖರಾದ ಸಂದೇಶ ಶೆಟ್ಟಿ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು.ನಂತರ ಪಕ್ಷದ ಕಛೇರಿಯಿಂದ ಬಿ.ಸಿ. ರೋಡು ಪೇಟೆಯಲ್ಲಿ ತಿರಂಗಾ ಯಾತ್ರೆ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ದಿನೇಶ್ ಅಮ್ಟೂರು, ಜಿಲ್ಲಾ ವಕ್ತಾರ ಡೊಂಬಯ ಅರಳ,ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ ಸುದರ್ಶನ್ ಬಜ, ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ರಾಮದಾಸ್ ಬಂಟ್ವಾಳ , ಗೋವಿಂದ ಪ್ರಭು ಹಾಗೂ ಕ್ಷೇತ್ರ ಪದಾಧಿಕಾರಿಗಳು,ವಿವಿಧ ಮೋರ್ಚಾ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.