ಬಂಟ್ವಾಳ: ವಿವಿಧೆಡೆ 78ನೇ ಸ್ವಾತಂತ್ರ್ಯೋತ್ಸವ
ಸಿದ್ದಕಟ್ಟೆ..
ಬಂಟ್ವಾಳ: ಸಿದ್ದಕಟ್ಟೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ದ್ವಜಾರೋಹಣ ಗೈದರು. ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ, ನಿರ್ದೇಶಕರಾದ ಸಂದೇಶ ಶೆಟ್ಟಿ ಪೋಡುಂಬ, ಉಮೇಶ್ ಗೌಡ, ದೇವರಾಜ್ ಸಾಲಿಯಾನ್, ಜಾರಪ್ಪ ನಾಯ್ಕ, ವೀರಪ್ಪ ಪರವ,ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.ಸುಭಾಸ್ ಸ್ವಾಗತಿಸಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅರತಿ ಶೆಟ್ಟಿ ವಂದಿಸಿದರು..
ಅಜ್ಜಿಬೆಟ್ಟು ಶಾಲೆ:
ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣವನ್ನು ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಬೇಬಿ ಕುಂದರ್ ನೆರವೇರಿಸಿ, ಸಂದೇಶ ನೀಡಿದರು. ಬಳಿಕ ಮಾದಕ ದ್ರವ್ಯ ನಿಯಂತ್ರಣದ ವಿಚಾರವಾಗಿ ರೋಟರಿ ಸದಸ್ಯ ಹಾಗೂ ವೈದ್ಯ ಡಾ. ನಿರಂಜನ ಆಚಾರ್ಯ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ ವಹಿಸಿದ್ದರು. ಈ ಸಂದರ್ಭ ಭೂಮಾಪಕರ ಸಂಘದ ತಾಲೂಕು ಅಧ್ಯಕ್ಷ ರಾಘವೇಂದ್ರ ರಾವ್, ಜಿಲ್ಲಾ ಕಾರ್ಯದರ್ಶಿ ಲೋಕೇಶ್, ಆನ್ಸ್ ಕ್ಲಬ್ ಅಧ್ಯಕ್ಷೆ ಭಾರತಿ ಕುಂದರ್, ರೋಟರಿ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಬಾಳಿಗಾ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗಣೇಶ್ ಕಾಮಾಜೆ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಸತೀಶ್ ಕುಲಾಲ್, ರೋಟರಿ, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಲಕ್ಷ್ಮೀ ಸ್ವಾಗತಿಸಿದರು. ಹಿರಿಯ ಸಹಶಿಕ್ಷಕಿ ಸುಶೀಲಾ ಸಂವಿಧಾನ ಪೀಠಿಕೆ ಬೋಧಿಸಿದರು. ಶಿಕ್ಷಕಿ ಲಾವಣ್ಯ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞೆ ಬೋಧಿಸಿದರು. ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಹಿರಿಯ ಸಹಶಿಕ್ಷಕಿ ತಾಹಿರಾ ಕಾರ್ಯಕ್ರಮ ನಿರ್ವಹಿಸಿದರು.
ಆಲಾಡಿ ಶಾಲೆ
ಬಂಟ್ವಾಳ: ದ. ಕ ಜಿ. ಪ. ಹಿರಿಯ ಪ್ರಾಥಮಿಕ ಶಾಲೆ ಆಲಾಡಿ ಸಜೀ ಪಮುನ್ನೂರು 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕಬೀರ್ ಅಹ್ಮದ್ ನೆರವೇರಿಸಿದರು. ಸಜಿಪ ಮಾಗಣೆ ತಂತ್ರಿ ಎಮ್ .ಸುಬ್ರಹ್ಮಣ್ಯ ಭಟ್ ಸ್ವಾತಂತ್ರ್ಯೋತ್ಸವದ ಮಹತ್ವ ತಿಳಿಸಿದರು ಶಾಲಾ ಮುಖ್ಯೋಪಾಧ್ಯಾಯ ರೋಹಿಣಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಸಜೀಪಮೂಡ:
ಸುಭಾಷ್ ಯುವಕಮಂಡಲ ಸುಭಾಶ್ ನಗರ ಸಜಿಪಮೂಡ ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಯುವಕ ಸಂಘದ ಅಧ್ಯಕ್ಷ ಎಸ್ ಶ್ರೀಕಾಂತ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ , ಸಜೀಪಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ,ಶಾಲಾ ಮುಖ್ಯೋಪಾಧ್ಯಾಯನಿ ವತ್ಸಲ, ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಬೆಲ್ಚಡ, ಶಾರದಾ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷ ಕಿಶೋರ್, ಶ್ರೀ ನಾರಾಯಣ ಗುರು ಮಂದಿರ ಅಧ್ಯಕ್ಷ ಗಿರೀಶ್ ಪೂಜಾರಿ, ಯುವಕಮಂಡಲದ ಸದಸ್ಯರು. ಪದಾಧಿಕಾರಿಗಳು,ಶಾಲಾ ಶಿಕ್ಷಕಿಯರು, ವಿದ್ಯಾರ್ಥಿಗಳು,ಊರ ನಾಗರಿಕರು ಉಪಸ್ಥಿತರಿದ್ದರು.
ಬಂಗ್ಲೆಗುಡ್ಡೆ ಅಂಗನವಾಡಿ
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ವಾರ್ಡ್ ಸಂಖ್ಯೆ 24 ರ ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರವನ್ನು ಆಧುನೀಕರಣಕ್ಕೆ ಸಕಲ ಪ್ರಯತ್ನಗಳನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಭರವಸೆ ನೀಡಿದರು.
ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ನಡೆದ ದೇಶದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು,
ಕಳೆದ ಡಿಸೆಂಬರ್ ನಲ್ಲಿ ನಿಧನರಾದ ಅಂಗನವಾಡಿ ಶಿಕ್ಷಕಿ ಪ್ರೇಮಾ ಟೀಚರ್ ಅವರನ್ನು ಸ್ಮರಿಸಿ ಅವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.
ಅಂಗನವಾಡಿ ಶಿಕ್ಷಕಿಯರಾದ ಹರಿಣಾಕ್ಷಿ ಟೀಚರ್, ಜ್ಯೋತಿ ಟೀಚರ್, ಆಶಾ ಕಾರ್ಯಕರ್ತೆ ಜ್ಯೋತಿ ಲಕ್ಷ್ಮಿ, ಪತ್ರಕರ್ತ ಪಿ ಎಂ ಅಶ್ರಫ್ ಪಾಣೆಮಂಗಳೂರು, ಪ್ರಮುಖರಾದ ಭವ್ಯ, ಶರೀಫ್ ಭೂಯಾ, ಮುನೀರ್ ಬಂಗ್ಲೆಗುಡ್ಡೆ, ಇಕ್ಬಾಲ್ ಬಂಗ್ಲೆಗುಡ್ಡೆ, ರಿಯಾಝ್ ಎಸ್ ಆರ್ ಆಲಡ್ಕ, ಶಮೀರ್ ನಂದಾವರ, ಮುಹಮ್ಮದ್ ಬಂಗ್ಲೆಗುಡ್ಡೆ, ರಫೀಕ್ ಬೋಗೋಡಿ, ಬಶೀರ್ ಬೋಗೋಡಿ, ಜಯಲಕ್ಷ್ಮಿ ಮೊದಲಾದವರು ಭಾಗವಹಿಸಿದ್ದರು.