
ಕಾರ್ಕಳದ ಶಾಸಕ ಸುನಿಲ್ ಕುಮಾರ್ ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.
ಸುನೀಲ್ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ. ಸುನಿಲ್ ಕುಮಾರ್ ರಿಂದ ಎರಡು ಜಿಲ್ಲೆ ಜನರಿಗೆ ಮಹಾಮೋಸವಾಗಿದೆ. ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು ಭಗವಂತನಿಗೆ ಮೋಸ ಮಾಡಿದ್ದಾರೆ. ಈ ಮೂರ್ತಿ ಕಂಚಿನದ್ದೋ ಫೈಬರ್ ಎಂಬುದೋ ಈಗಾಗಲೇ ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಆರೋಪಿಸಿದ್ದಾರೆ.
ಇದನ್ನೂ ಓದಿ: ಗ್ಯಾರಂಟಿ ಯೋಜನೆ ಅಂತ್ಯ ಆಗುತ್ತಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳೋದೇನು?
ಉಡುಪಿ ಜಿಲ್ಲೆಯ ಜನತೆಯೂ ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ ಇನ್ನು ಮನುಷ್ಯರು ಯಾವ ಲೆಕ್ಕ?.ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
