Published On: Thu, Aug 15th, 2024

ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಿ : ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ ರಿಜ್ವಾನ್

ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮತ್ತು ರಾಜಕೀಯ ಪ್ರಕ್ಷುಬ್ಧತೆಯನ್ನು ಪರಿಹರಿಸುವಂತೆ ಕರ್ನಾಟಕ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

ಶಾಸಕ ಬರೆದ ಪತ್ರದಲ್ಲಿ, ಬಾಂಗ್ಲಾದೇಶಲ್ಲಿ ಅಲ್ಲಿನ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ದಾಳಿಗಳು ನಡೆಯುತ್ತಿರುವ ಬಗ್ಗೆ ದೇಶದಲ್ಲಿ ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹ್ಯಾಂಡಲ್‌ಗಳು ಸುದ್ದಿಗಳನ್ನು ಪ್ರಕಟಿಸುತ್ತಿವೆ. ಅದು ನಿಜವಾಗಿದ್ದರೆ (ಕೆಲವು ಫೇಕ್ ಎಂಬುದು ಕಂಡುಬಂದಿದೆ), ಅವುಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ. ವರದಿಗಳು/ವೀಡಿಯೋಗಳು ನಿಜವೆಂದು ಸಾಬೀತಾದರೆ, ಭಾರತ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಅಲ್ಪಸಂಖ್ಯಾತರು ಭಯವಿಲ್ಲದೆ ಬದುಕುತ್ತಿದ್ದಾರೆ, ಆದರೆ ಅಲ್ಲಿ ಹಿಂದೂಗಳು…. ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕಳವಳ

1971 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಮಿಲಿಟರಿ ಕ್ರಮವನ್ನು ಕೈಗೊಂಡಿದ್ದರು. ಅವರು ತೆಗೆದುಕೊಂಡಿದ್ದಂಥ ದಿಟ್ಟ ನಿರ್ಧಾರ ಕೈಗೊಳ್ಳಲು ಪ್ರಧಾನಿಯವರು ಹಿಂಜರಿಯಬಾರದು. ಈ ನಿರ್ಣಾಯಕ ಸಮಯದಲ್ಲಿ ಬಾಂಗ್ಲಾದೇಶದಲ್ಲಿರುವ ನಮ್ಮ ಹಿಂದೂ ಸಹೋದರ ಸಹೋದರಿಯರಿಗೆ ಬೆಂಬಲದ ಹಸ್ತವನ್ನು ಚಾಚಲು ನಿಮ್ಮ ಗೌರವಾನ್ವಿತ ಕಚೇರಿಯನ್ನು ಬಳಸಬೇಕೆಂದು ನಾನು ವಿನಂತಿಸುತ್ತೇನೆ. ನಿಮ್ಮ ನಾಯಕತ್ವದಲ್ಲಿ, ಬಾಂಗ್ಲಾದೇಶದ ಅಲ್ಪಸಂಖ್ಯಾತರ ಕಳವಳಗಳನ್ನು ಪರಿಹರಿಸಲು ಭಾರತವು ನಿರ್ಣಾಯಕ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter