ಮಂಗಳೂರು : ಸಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ಬಂಧನ

ಮಂಗಳೂರಿನ ಉಲ್ಲಾಳದಲ್ಲಿ ನಡೆದಿದ್ದ ಸಮೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಯನ್ನು ಚುರುಕು ಗೊಳಿಸಿರುವ ಪೊಲೀಸರು ನಾಲ್ವರನ್ನು ಉಳ್ಳಾಲ ವಶಕ್ಕೆ ಪಡೆದಿದ್ದಾರೆ.
ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ ಸಮೀರ್ ನನ್ನು ಭಾನುವಾರ ರಾತ್ರಿಯ ವೇಳೆ ತಂಡವೊಂದು ತೊಕ್ಕೊಟ್ಟು ಕಲ್ಲಾಪುವಿನಲ್ಲಿ ಕೊಚ್ಚಿ ಕೊಲೆಗೈದಿತ್ತು. ಹೌದು, ಸಮೀರ್ ತನ್ನ ತಾಯಿ ಮತ್ತು ಕುಟುಂಬ ಸದಸ್ಯರೊಂದಿಗೆ ಪಂಪ್‌ವೆಲ್‌ನಲ್ಲಿರುವ ತನ್ನ ಫ್ಲಾಟ್‌ಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಕಲ್ಲಾಪುವಿನ ವಾಣಿಜ್ಯ ಸಂಕೀರ್ಣದ ಬಳಿ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳ ತಂಡವು ಸಮೀರ್ ಅವರ ತಲೆ ಮತ್ತು ಕುತ್ತಿಗೆಯನ್ನು ಗುರಿಯಾಗಿಸಿಕೊಂಡು ಕತ್ತಿಯಿಂದ ಅಮಾನುಷವಾಗಿ ಹಲ್ಲೆ ನಡೆಸಿದೆ. ಇಲ್ಯಾಸ್ ಹತ್ಯೆಗೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೊಲೀಸರು, ಈ ಹತ್ಯೆಯಲ್ಲಿ ಐವರು ಭಾಗಿಯಾಗಿದ್ದಾರೆ ಎಂದು ಶಂಕಿಸಿದ್ದಾರೆ.
ಇದನ್ನೂ ಓದಿ: 16 ಬೋರ್‌ವೆಲ್ ಪಂಪುಗಳ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು
ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಲ್ಯಾಸ್ ಪತ್ನಿಯ ಸಹೋದರ ಮೊಹಮ್ಮದ್ ನೌಷದ್ ಈ ಕೊಲೆಯ ಪ್ರಮುಖ ರೂವಾರಿಯಾಗಿರುವುದು ತನಿಖೆಯಿಂದ ತಿಳಿದು ಬಂದಿದೆ. ಇನ್ನು ಒಬ್ಬಾತನು ತಲೆ ಮರೆಸಿಕೊಂಡಿದ್ದು ಆತನ ಬಂಧನವಾಗಬೇಕಾಗಿದ್ದು, ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.