ಬಂಟ್ವಾಳ: ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆ
ಬಂಟ್ವಾಳ: ಇಲ್ಲಿನ ಚುಟುಕು ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ವಕೀಲ ರವೀಂದ್ರ ಕುಕ್ಕಾಜೆ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಬಂಟ್ವಾಳ ಸೀನಿಯರ್ ಛೇಂಬರ್ ಘಟಕದ ಉಪಾಧ್ಯಕ್ಷರಾಗಿ, ವಿವಿಧ ಸಾಹಿತ್ಯ ಮತ್ತು ಕವಿಗೋಷ್ಠಿ, ವಿಚಾರ ಗೋಷ್ಠಿಗಳಲ್ಲಿ ಕಾನೂನು ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ಶಿಬಿರ ನಡೆಸುತ್ತಿದ್ದಾರೆ ಎಂದು ಪರಿಷತ್ತಿನ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.