ಸುಮಂಗಲಾ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಅತ್ಯುತ್ತಮ ಸಂಘ ಪ್ರಶಸ್ತಿ
ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಅತ್ಯುತ್ತಮ ಸಂಘ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಈಚೆಗೆ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷ ನಾಗೇಶ ಕಲ್ಲಡ್ಕ, ಸಿಇಒ ವಸಂತ ಇದ್ದಾರೆ.