Published On: Sat, Aug 17th, 2024

ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರಿಂದ ಅನುಮತಿ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರಿಂದ ಅನುಮತಿ ನೀಡಲಾಗಿದೆ. ಇದೀಗ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಗವರ್ನರ್ ಯಾವ ರೀತಿಯಲ್ಲಿ​ ‌ಅನುಮತಿ ಕೊಟ್ಟಿದ್ದಾರೆಂದು ಗೊತ್ತಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಈಗಾಗಲೇ ಸಿಎಂ ಲೀಗಲ್ ಟೀಮ್ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರದಿಂದ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಒತ್ತಡ ಇತ್ತು.ಆ ಕಾರಣದಿಂದ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಮೌಖಿಕವಾಗಿ, ಪತ್ರ ವ್ಯವಹಾರ ಮಾಡಿಲ್ಲ, ಈ ಬಗ್ಗೆ ‌ನಾವು ಉತ್ತರ ರಾಜ್ಯಪಾಲರಿಗೆ ಕೊಟ್ಟಿದ್ದೇವೆ. ಶೋಕಾಸ್ ನೋಟಿಸ್​​​ ಕೂಡ ಉತ್ತರ ನೀಡಲಾಗಿದೆ. ಇಷ್ಟೆಲ್ಲ ಮಾಡಿದರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ ಎಂದ ಪರಮೇಶ್ವರ್ ಹೇಳಿದ್ದಾರೆ. ನೇರವಾಗಿ ಸಿಎಂ ಸಿದ್ದರಾಮಯ್ಯ ಯಾವುದ್ರಲ್ಲೂ ಭಾಗಿಯಾಗಿಲ್ಲ.

ಇದನ್ನೂ ಓದಿ: ಕಸ್ಟಮ್ ಹೆಸರಿನಲ್ಲಿ ವೈದ್ಯನಿಗೆ 1.33 ಕೋಟಿ ವಂಚನೆ

ದ್ವೇಷದ ರಾಜಕಾರಣ ಅನಿಸುತ್ತೆ ಎಂದು ಹೇಳಿದ್ದಾರೆ. ಇನ್ನು ಸಿಎಸ್​ ಶಾಲಿನ್ ರಜನೀಶ್​, ಎಸಿಎಸ್​ ಅತೀಕ್​ಗೆ ನೋಟಿಸ್​ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆ ಮಾಡಲಾಗಿದೆ. ಇದರ ಜತೆಗೆ ಮುಡಾ ಪ್ರಕರಣದ ಮೂವರು ದೂರುದಾರಾರದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ , ಪ್ರದೀಪ್​​​ಗೂ ನೋಟಿಸ್​​ ನೀಡಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter