ಮಂಗಳೂರು : ಪೊಳಲಿ ಸೇತುವೆಯಲ್ಲಿ ವಾಹನ ಸಂಚಾರ ಬಂದ್, ಜಿಲ್ಲಾಧಿಕಾರಿಯೊಂದಿಗೆ ಸಂಸದ, ಶಾಸಕರ ಚರ್ಚೆ
ಮಂಗಳೂರು ತಾಲೂಕಿನ ಲೋಕೋಪಯೋಗಿ ಇಲಾಖೆಯಡಿಯಲ್ಲಿ ಬರುವ ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯು ಅಪಾಯದ ಸ್ಥಿತಿಯಲ್ಲಿರುವ ಕಾರಣ ಘನವಾಹನ ಸಂಚಾರ ನಿಷೇಧಿಸಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅದೇಶ ನೀಡಿದ್ದಾರೆ. ಈ ಮುಂಜಾಗೃತ ಕ್ರಮದಿಂದಾಗಿ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಈ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಅವರ ಜೊತೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡರು.
ಅದಲ್ಲದೇ, ತಜ್ಞರ ತಂಡದಿಂದ ಸೇತುವೆಯ ದೃಢತೆಯ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಲಾಯಿತು. ಈ ವೇಳೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಅಮರನಾಥ ಜೈನ್, ಅಪರ ಜಿಲ್ಲಾಧಿಕಾರಿ ಸಂತೋಷ್ ಸೇರಿದಂತೆ ಇನ್ನಿತ್ತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.