ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಹಿಂದೂ ವಿದ್ಯಾರ್ಥಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಬಾಲಕನಿಂದ ಇರಿದಿದ್ದಾನೆ. ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ವಿದ್ಯಾರ್ಥಿಯಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾರ್ಥಿ ಚೂರಿಯಿಂದ ಕೈಗೆ ಇರಿದಿದ್ದಾನೆ. ಇದೀಗ ವಿದ್ಯಾರ್ಥಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಸದ್ಯ ವಿದ್ಯಾರ್ಥಿನಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಒತ್ತಾಯಿಸಿದ್ದಾರೆ.
ಇದೀಗ ಆಸ್ಪತ್ರೆಯ ಮುಂದೆ ಜನ ಸೇರಿ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ. ಕೈಗೆ ಗಾಜು ತಾಗಿದ್ದಕ್ಕೆ ಕಾಲೇಜು ಪ್ರಾಂಶುಪಾಲರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರಿಂದ ತನಿಖೆ ನಡೆಸಲಾಗಿದೆ.