ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ರಾಜೀವ್ಗಾಂಧಿ ಆರೋಗ್ಯ ವಿವಿಯ ಮೂರು ದಿನಗಳ 16ನೇ ಕ್ರೀಡಾ ಕೂಟವನ್ನು ಗುರುವಾರ ವಿದ್ಯಾಗಿರಿಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜೀವ್ಗಾಂಧಿ ಆರೋಗ್ಯ ವಿವಿಯ ಕುಲಸಚಿವ ಡಾ. ಡಿ. ಪ್ರೇಮ್ ಕುಮಾರ್ ಉದ್ಘಾಟಿಸಿದರು.
IMG_0780

IMG_0754

IMG_0767

IMG_0776

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ರೀಡೆ ವಿದ್ಯಾಥರ್ಿಗಳ ಮಾನಸಿಕ ದೈಹಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಸ್ಪರ್ಧಾತ್ಮಕ ಮನೋಭಾವ, ಆತ್ಮ ವಿಶ್ವಾಸ, ಉತ್ತಮ ಚಾರಿತ್ರ್ಯವನ್ನು ಬೆಳೆಸುತ್ತದೆ. ಕ್ರೀಡೆಯಲ್ಲಿ ಎಲ್ಲರೂ ಪ್ರಥಮ ಸ್ಥಾನದ ನಿರೀಕ್ಷೆ ಇಟ್ಟುಕೊಳ್ಳದೆ ಸ್ಪರ್ಧಾ ಸ್ಪೂರ್ತಿಯಿಂದ ಪಾಲ್ಗೊಳ್ಳಬೇಕು ಎಂದ ಅವರು ರಾಜೀವ್ಗಾಂಧಿ ಆರೋಗ್ಯ ವಿವಿಯು ಶಿಕ್ಷಣದ ಜೊತೆಗೆ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಆಳ್ವಾಸ್ ಕಾಲೇಜು ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡುತ್ತಿದ್ದು ವಿವಿಗಳಿಗೆ ಸಾಧಕ ಕ್ರೀಡಾ ಪಟುಗಳನ್ನು ನೀಡುವ ಮೂಲಕ ವಿವಿಗಳ ಕೀರ್ತಿಯನ್ನು ಹೆಚ್ಚಿಸಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ರಾಜೀವ್ಗಾಂಧಿ ಆರೋಗ್ಯ ವಿವಿಯ ಡೆಪ್ಯೊಟಿ ಡೈರೆಕ್ಟರ್ ಡಾ. ವಸಂತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೇಘಶ್ರೀ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಷ್ಟ್ರೀಯ ಕ್ರೀಡಾ ಪಟುಗಳಾದ ಪ್ರಜ್ಞಾ ಶೆಟ್ಟಿ ರಶ್ಮಾ, ಸುದೀಪ್, ಸೃಜನ ಕ್ರೀಡಾ ಜ್ಯೋತಿ ಬೆಳಗಿದರು. ಸುಶ್ಮಿತಾ, ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. 60 ತಂಡಗಳು ಪಾಲ್ಗೊಂಡಿದ್ದು ಆಕರ್ಷಕರ ಪಥ ಸಂಚಲನ ನಡೆಯಿತು.

By suddi9

Leave a Reply

Your email address will not be published. Required fields are marked *