ಬಂಟ್ವಾಳ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳು ಯಾರನ್ನೂ ದ್ವೇಷಿಸದೆ ಸಮಾಜದಲ್ಲಿದ್ದಂತಹ ಅಸಮಾನತೆ, ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಶ್ರೇಷ್ಠ ದಾರ್ಶನಿಕ ಎಂದು ಶಾಸಕ ರಾಜೇಶ್ ನಾಕ್ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ಮಂಗಳವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೦ನೇ ಜಯಂತಿಯನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ, ಅವರ ವಿಶ್ವ ಕಂಡ ಶ್ರೇಷ್ಠ ಸಂತರು. ಅವರ ತತ್ವಾದರ್ಶಗಳು ಸಾರ್ವಕಾಲಿಕ. ಮುಂದಿನ ದಿನಗಳಲ್ಲಿ ಎಲರನ್ನೂ ಸೇರಿಸಿಕೊಂಡು ಪ್ರತ್ಯೇಕ ಆಚರಣ ಸಮಿತಿಯನ್ನು ರಚಿಸಿ ನಾರಾಯಣ ಗುರುಗಳ ಜಯಂತಿ ಆಚರಿಸುವಂತೆ ತಿಳಿಸಿದರು.
ಪತ್ರಕರ್ತ ಸಂದೀಪ್ ಸಾಲ್ಯಾನ್ ಉಪನ್ಯಾಸ ನೀಡಿ ಪ್ರಸ್ತುತ ಕಾಲಘಟ್ಟದಲ್ಲಿ ಯುವ ಸಮುದಾಯಕ್ಕೆ ಬ್ರಹ್ಮಶ್ರೀ ನಾರಯಣ ಗುರುಗಳ ತತ್ವ ಸಂದೇಶವನ್ನು ತಲುಪಿಸುವ ಅನಿವಾರ್ಯತೆ ಇದೆ ಎಂದರು.
ತಹಶೀಲ್ದಾರ್ ಡಿ. ಅರ್ಚನಾ ಭಟ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್ ಮಾತನಾಡಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಭುವನೇಶ್‌ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ, ಕೋಶಾಧಿಕಾರಿ ಆನಂದ ಸಾಲ್ಯಾನ್, ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್, ಆರೋಗ್ಯಾಧಿಕಾರಿ ಅಶೋಕ್ ರೈ, ಸಮಾಜ ಕಲ್ಯಾಣಾಧಿಕಾರಿ ಸುನೀತಾ, ಉಪನೋಂದಾಣಾಧಿಕಾರಿ ಕವಿತಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಜನಾರ್ದನ ಸ್ವಾಗತಿಸಿ, ಶ್ರೀಕಲಾ ಕಾರಂತ್ ವಂದಿಸಿದರು, ಉಪತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.