ಆಗಸ್ಟ್ 12 ಸೋಮವಾರದಂದು ವಿಟ್ಲ-ಸಾಲೆತ್ತೂರು- ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾರೆ.

ಮೃತ ಸವಾರನನ್ನು ಕಟ್ಟತ್ತಿಲ ನಿವಾಸಿ ಮುಝಾಂಬಿಲ್(30) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮುಝಂಬಿಲ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾರೆ. ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಈ ಅಪಘಾತ ಸಂಭವಿಸಿದೆ.

By suddi9

Leave a Reply

Your email address will not be published. Required fields are marked *