ಶಾಸಕ ರಾಜೇಶ್​​​ ನಾಯ್ಕ್

ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್​​​ ತನ್ನದಾಗಿಸಿಕೊಂಡಿದೆ. ಇನ್ನು ಎಸ್​​​ಡಿಪಿಐ ಉಪಧ್ಯಾಕ್ಷ ಸ್ಥಾನವನ್ನು ಪಡೆದುಕೊಂಡಿದೆ, ಕಾಂಗ್ರೆಸ್​​​​ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು ಎಸ್​​​ಡಿಪಿಐ ಅಧ್ಯಕ್ಷ ಹಾಗೂ ಉಪಧ್ಯಾಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿತ್ತು. ಕಾಂಗ್ರೆಸ್​​​​ ಮತ್ತು ಎಸ್​​ಡಿಪಿಐ ಮೈತ್ರಿ ಮಾಡಿಕೊಂಡ ಕಾರಣ ಎರಡು ಅಧ್ಯಕ್ಷ ಹಾಗೂ ಉಪಧ್ಯಾಕ್ಷ ಸ್ಥಾನವನ್ನು ಹಂಚಿಕೊಂಡಿದೆ. ಬಿಜೆಪಿ 13 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್​​ ಹಾಗೂ ಎಸ್​​​ಡಿಪಿಐ ಮೈತ್ರಿ ಬಗ್ಗೆ ಬಂಟ್ವಾಳದ ಶಾಸಕ ರಾಜೇಶ್​​​ ನಾಯ್ಕ್​​​ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಮತ್ತು ಎಸ್.ಡಿ.ಪಕ್ಷ ಹೊಂದಾಣಿಕೆಯಿಂದ ಪುರಸಭೆಯ ಅಧಿಕಾರ ಪಡೆದುಕೊಂಡಿದೆ, ಇದರಿಂದ ಜನತೆಗೆ ಸ್ಪಷ್ಟವಾದ ಸಂದೇಶ ರವಾನೆ ಆಗಿದೆ ಎಂದು ಶಾಸಕ ರಾಜೇಶ್​​ ನಾಯ್ಕ್​​​​ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್.ಡಿ.ಪಿ.ಐ.ನ್ನು ಯಾವ ಪಕ್ಷದ ಬಿ.ಟೀಮ್ ಎಂಬುದು ಜನತೆಗೆ ಸ್ಪಷ್ಟವಾಗಿದೆ ಬಿಜೆಪಿ 13 ಮತಗಳನ್ನು ಅತ್ಯಂತ ಹೆಚ್ಚು ಮತಗಳನ್ನು ಪಡೆದರು ಕೂಡ ಕಾಂಗ್ರೆಸ್ ಮತ್ತು ಎಸ್ ಡಿಪಿ ಐ ಪಕ್ಷದ ಹೊಂದಾಣಿಕೆಯಿಂದ ಅಧಿಕಾರ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಎಸ್.ಡಿ.ಪಿ.ಐ ಯಾವ ಪಕ್ಷದ ಬಿ.ಟೀಮ್ ಎಂಬುದು ಸ್ಪಷ್ಟವಾಗಿದೆ ,ಇದರಿಂದ ಬಂಟ್ವಾಳದ ಜನತೆಗೆ ಒಂದು ಸಂದೇಶ ರವಾನೆ ಆಗಿದೆ. ಬಹಳಷ್ಟು ಸಮಯದಿಂದ ನಾವು ಮತೀಯವಾದಿಗಳೊಂದಿಗೆ ಇಲ್ಲ ಎಂದು ಹೇಳಿಕೊಂಡು ಬರುತ್ತಿದ್ದ ಕಾಂಗ್ರೆಸ್ ಒಳಗಿಂದ ಒಳಗೆ ಒಪ್ಪಂದ ಮಾಡಿಕೊಂಡೇ ಬರುತ್ತಿತ್ತು ಎಂದು ಹೇಳಿದ್ದಾರೆ.

By suddi9

Leave a Reply

Your email address will not be published. Required fields are marked *