ಕಾರ್ಕಳ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಸಾವು

ಕಾರ್ಕಳ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಮೃತಪಟ್ಟ ಘಟನೆಯೊಂದು ಬುಧವಾರ ನಿಟ್ಟೆ ಸಮೀಪ ನಡೆದಿದೆ. ಅಪಘಾತದಲ್ಲಿ ಬಿಎಸ್ಸಿ ದ್ವಿತೀಯ ವರ್ಷದ ವಿದ್ಯಾರ್ಥಿ ಜನಿತ್ ಶೆಟ್ಟಿ (19) ಮೃತಪಟ್ಟಿದ್ದಾರೆ.
ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಗೆ ಎಸೆಯಲ್ಪಟ್ಟು ಬಸ್‌ನ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾರೆ. ಗಂಭೀರವಾಗಿ ಗಾಯಗೊಂಡ ಜನಿತ್ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರಿಳೆದ್ದಾರೆ.
ಇದನ್ನೂ ಓದಿ: ಬಂಟ್ವಾಳ: ಎಸ್.ಡಿ.ಪಿ.ಐ ಯಾವ ಪಕ್ಷದ ಬಿ ಟೀಮ್ ಎಂದು ಜನತೆಗೆ ಸ್ಪಷ್ಟವಾಗಿದೆ: ರಾಜೇಶ್ ನಾಯ್ಕ್
ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿಯಾದ ಜನಿತ್ ಶೆಟ್ಟಿ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ಓದುತ್ತಿದ್ದ ಎನ್ನಲಾಗಿದೆ. ಮೃತ ಯುವಕ ಜನಿತ್ ಅವರು ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.