ಪಂಚ ಗ್ಯಾರಂಟಿ ಯೋಜನೆ: ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಮಟ್ಟದ ಕಚೇರಿಯ ಉದ್ಘಾಟನೆ
ಬಂಟ್ವಾಳ : ರಾಜ್ಯ ಸರಕಾರದಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಮಟ್ಟದ ಕಚೇರಿ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಪಂಚಾಯತ್ ನ ಕಟ್ಟಡದಲ್ಲಿ ಚಾಲನೆಗೊಂಡಿತು.ಶುಕ್ರವಾರ ಗ್ಯಾರಂಟಿ ಯೋಜನೆಗಳ ಬಂಟ್ವಾಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ ಪೂಜಾರಿ ಅವರು ಕಚೇರಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳು ಶೇ.7 ರಷ್ಟು ಫಲಾನುಭವಿಗಳಿಗೆ ತಲುಪಲು ಬಾಕಿ ಇದ್ದು,ಇದಕ್ಕಿರುವ ಸಮಸ್ಯೆಯನ್ನು ಪರಿಹರಿಸಿಕೊಂಡು ಶೀಘ್ರದಲ್ಲಿ ಪೂರ್ಣ ಗೊಳಿಸಲು ಪ್ರಯತ್ನಿಸಲಾಗುವುದಲ್ಲದೆ ತನಗೆ ನೀಡಲಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಭರವಸೆಯಿತ್ತರು.
ಜಿಲ್ಲಾ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ, ಚುನಾವಣೆಯ ಪೂರ್ವದಲ್ಲಿ ಘೋಷಿಸಿದಂತೆ ಸರಕಾರದ ಅತ್ಯಂತ ಪ್ರಮುಖವಾದ ಗ್ಯಾರಂಟಿ ಯೋಜನೆಯನ್ನು ಜಿಲ್ಲೆಯಲ್ಲಿ ಶೇ. ೯೩ ರಷ್ಟು ಫಲಾನುಭವಿಗಳನ್ನು ಗುರುತಿಸಿ ತಲುಪಿಸುವ ಮೂಲಕ ಇಲಾಖಾಧಿಕಾರಿಗಳು ಅನುಷ್ಠಾನಕ್ಕೆ ತಂದಿದ್ದಾರೆ.ಉಳಿದಂತೆ ಇರುವಂತಹ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕು ಮಟ್ಟದಲ್ಲಿ ಮೇಳಗಳನ್ನು ನಡೆಸಿ ಫಲಾನುಭವಿಗಳಿಗೆ ಯೋಜನೆಯನ್ನು ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಗೊಳಿಸಲು ಸಮಿತಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.
ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ಬೂಡಾ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರುಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್.ರೋಡ್ರಿಗಸ್,ಕಾಂಗ್ರೆಸ್ ಮುಖಂಡರಾದಅಶ್ಬನಿ ಕುಮಾರ್ ರೈ,ಸುದರ್ಶನ ಜೈನ್, ಸಂಜೀವ ಪೂಜಾರಿ ಬೊಳ್ಳಾಯಿ, ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಆಲಿ, ಪದ್ಮನಾಭ ರೈ,ಮಹಮ್ಮದ್ ನಂದಾವರ, ಮಲ್ಲಿಕಾ ಶೆಟ್ಟಿ,ನಿಯೋಜಿತ ಬ್ಲಾಕ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸುದೀಂದ್ರ ಶೆಟ್ಟಿ, ಮಹಮ್ಮದ್ ಸಿರಾಜ್ ಎಂ.ಯು. ಸತೀಶ್ , ಮುರಳೀಧರ್ ವೈ, ವಿನಯಕುಮಾರ್, ಕಾಂಚಲಾಕ್ಷಿ, ಐಡಾ ಸುರೇಶ್, ಹರ್ಷನ್ ಬಿ.ಪವಿತ್ರ, ಚಂದ್ರಶೇಖರ, ಆಚಾರ್ಯ, ಅಬ್ದುಲ್ ಮಜೀದ್, ಜನಾರ್ದನ ಸಪಲ್ಯ, ಕೃಷ್ಣಪ್ಪ ಪೂಜಾರಿ, ಎನ್.ಅಬ್ದುಲ್ ಕರೀಂ ಉಪಸ್ಥಿತರಿದ್ದರು.
ತಾ.ಪಂ.ಇ.ಒ., ಸದಸ್ಯ ಕಾರ್ಯದರ್ಶಿ ಸಚಿನ್ ಕುಮಾರ್ ಸ್ವಾಗತಿಸಿ,ವಂದಿಸಿದರು.