ಉಡುಪಿ: ಹಿಂದೂ ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರ ಮಾಡಿದ ಮುಸ್ಲಿಂ ಯುವಕ

ಉಡುಪಿಯಲ್ಲಿ ಯುವತಿಯೊಬ್ಬ ಮೇಲೆ ಮುಸ್ಲಿಂ ಯುವಕರಿಬ್ಬರು ಅತ್ಯಾಚಾರ ಮಾಡಿದ್ದಾನೆ. ಮಾದಕ ಪದಾರ್ಥ ನೀಡಿ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಬ್ಬರು ಆರೋಪಿಗಳನ್ನು ಕಾರ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ಹೇಳಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಮುಖ ಆರೋಪಿ ಅಲ್ತಾಫ್ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮೂವರು ಆರೋಪಿಗಳ ವಿರುದ್ಧ ಸಂತ್ರಸ್ತ ಯುವತಿ ತಾಯಿ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಠಾಣೆಯ ಪೊಲೀಸರು ಇನ್ನೊಬ್ಬ ಅರೋಪಿಗೆ ಬಲೆ ಬೀಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಯುವತಿ ಪರಿಚಯ ಮಾಡಿಕೊಂಡಿದ್ದ ಅಲ್ತಾಫ್, ನಿನ್ನೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯವೆಸಿದ್ದಾನೆ ಎಂದು ಹೇಳಲಾಗಿದೆ.
ಇನ್ನು ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ದೂರು ಬಂದಿದೆ. ಸಂತ್ರಸ್ತಿಗೆ ಆರೋಪಿ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ, ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದಾರೆ ಎಂದು ಹೇಳಿದ್ದಾರೆ.
ಮಧ್ಯದಲ್ಲಿ ಏನನ್ನೊ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.