ಹುಡುಗಿ ವಿಚಾರವಾಗಿ ಮನೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ ಯುವಕರ ಗುಂಪು
ಮಂಗಳೂರು: ಯುವಕನೊಬ್ಬನಿಗೆ ಮನೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ. ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇನ್ನು ಯುವಕನಿಗೆ ಮಾರಣಾಂತಿಕವಾಗಿ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೊಳಂತೂರು ನಿವಾಸಿ ರಹೀಮ್ ಎಂಬಾತನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ. ಇನ್ನು ಆತನನ್ನು ಎಲ್ಲಿ ಕೂಡಿ ಹಾಕಿ ಹೊಡೆದಿದ್ದಾರೆ ಎಂಬುದು ಇನ್ನು ತಿಳಿದು ಬಂದಿಲ್ಲ. ಪೋಲೀಸ್ ಮಾಹಿತಿ ಪ್ರಕಾರ ಪುತ್ತೂರು ಯುವಕರ ತಂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ.
ಇನ್ನು ವರದಿಗಳ ಪ್ರಕಾರ ಹುಡುಗಿ ವಿಚಾರದಲ್ಲಿ ಕೂಡಿ ಹಾಕಿ ಥಳಿಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಯಾವ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿಲ್ಲ. ಪ್ರಕರಣವನ್ನು ರಾಜಿಯಲ್ಲಿ ಮುಗಿಸಿದ್ದಾರೆ ಎಂದು ಹೇಳಲಾಗಿದೆ.