ಕ್ಲಸ್ಟರ್ ಮಟ್ಟದ “ಪ್ರತಿಭಾ ಕಾರಂಜಿ” ಗೂ ಅನುದಾನ ಒದಗಿಸಲು ಭಟ್ ಒತ್ತಾಯ
ಬಂಟ್ವಾಳ: ತಾಲೂಕು,ಜಿಲ್ಲಾ ವಲಯ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಅನುದಾನ ನೀಡುವಂತೆಯೇ ಕ್ಲಸ್ಟರ್ ಮಟ್ಟದಲ್ಲಿ ನಡೆಯುವಂತಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕು ಸರಕಾರ ಶಿಕ್ಷಣ ಇಲಾಖೆಯ ಮೂಲಕ ಒದಗಿಸಬೇಕು ಎಂದು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಒತ್ತಾಯಿಸಿದ್ದಾರೆ.
ಶನಿವಾರ ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ “ಸಜೀಪ ಕ್ಲಸ್ಟರ್ “ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕ್ಲಸ್ಟರ್ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಅನುದಾನ ಒದಗಿಸದೆ ಇರುವುದು ಸರಿಯಲ್ಲ ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವಾಗಿದೆ.ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕು ಸೂಕ್ತ ಅನುದಾನ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದರು.
ಸಿಆರ್ ಪಿಒ ಇಂದಿರಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಜಿಪ ಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿದ್ದಿಕ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೌಮ್ಯ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯನಿ ವತ್ಸಲಾ ಸ್ವಾಗತಿಸಿದರು. ಕಂಚಿನಡ್ಕ ಶಾಲಾ ಮುಖ್ಯೋಪಾಧ್ಯಾಯ ಡೇಸಾ ಕಾರ್ಯಕ್ರಮ ನಿರ್ವಹಿಸಿದರು.ಶಾಲಾ ಶಿಕ್ಷಕಿ ಜೆಸಿಂತಾ ವಂದಿಸಿದರು. ಬಳಿಕ ಕ್ಲಸ್ಟರ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆಗಳು ಜರಗಿತು.