ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ ಸಾರ್ವಜನಿಕರಲ್ಲಿ ಆತಂಕ :ಸುಲೋಚನಾಭಟ್
ಬಂಟ್ವಾಳ: ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಅತ್ಯಂತ ಖಂಡನೀಯವಾಗಿದ್ದು,ಈ ಪೈಶಾಚಿಕ ಕೃತ್ಯಜನತೆಯನ್ನು ಆತಂಕ ಕೀಡು ಮಾಡಿದೆ ಎಂದು ಬಿಜೆಪಿ ನಾಯಕಿ ಜಿ.ಕೆ. ಸುಲೋಚನಾ ಭಟ್ ಹೇಳಿದ್ದಾರೆ.ಯುವತಿಯನ್ನು ಅಪಹರಿಸಿ ಬಳಿಕ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ವೆಸಗಿರುವುದನ್ನುಗಮನಿಸಿದಾಗ ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿಯ ನೇಹಾ ಹತ್ಯೆ, ಅಂಜಲಿ ಹತ್ಯೆ, ಕೊಡಗಿನ ವಿದ್ಯಾರ್ಥಿನಿಯ ಕತ್ತು ಕತ್ತರಿಸಿ ಹೀನಾಯ ಹತ್ಯೆ,ಮಹಿಳೆಯರ ಮೇಲೆ ದೌರ್ಜನ್ಯದಂತ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದನ್ನು ನೋಡಿದಾಗ ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವೇ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿಸಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಲ್ಲಿ ಬರೋಬ್ಬರಿ 198 ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಕರ್ನಾಟಕ ರಾಜ್ಯದಲ್ಲಿ ದಾಖಲಾಗಿದ್ದು, ಸಾರ್ವಜನಿಕರಲ್ಲಿ ಅದರಲ್ಲು ಮಹಿಳೆಯರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಟ್ಟುನಿಟ್ಟಿನ ಶಿಕ್ಷೆಗೆ ಒಳಪಡಿಸಬೇಕು ಮತ್ತು ಇದರ ಹಿಂದಿರುವ ಜಾಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳಬೇಕುಎಂದು ಬಿಜೆಪಿ ಪ್ರಮುಖರಾದ ಸುಲೋಚನಾ ಭಟ್ ಅವರು ಪ್ರಕಟಣೆಯ ಮೂಲಕ ಹಿರಿಯ ಪೊಲೀಸ್ ಅಧಿಕಾರಿಯನ್ನು ಆಗ್ರಹಿಸಿದ್ದಾರೆ.