SDPI ಮುಖಂಡ ರಿಯಾಝ್ ಕಡಂಬು ವಿರುದ್ಧ ಬಿಜೆಪಿ ದೂರು
ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಅವರಿಗೆ ಮುಕ್ತವಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಎಸ್ ಡಿಪಿಐ ಮುಖಂಡ ರಿಯಾಝ್ ಕಡಂಬು ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.”ನಾವು ಕಾನೂನು, ಸಂವಿಧಾನವನ್ನು ಗೌರವಿಸುತ್ತಿರುವುದಕ್ಕೆ ಭರತ್ ಶೆಟ್ಟಿ ಉಸಿರಾಡುತ್ತಿದ್ದಾರೆ” ಎಂದು ಮಂಗಳೂರು ಉತ್ತರ ಶಾಸಕರ ಮೇಲೆ ತನ್ನ ಭಾಷಣದಲ್ಲಿ ಮುಕ್ತವಾಗಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಬಿಜೆಪಿ ಯುವ ಮೋರ್ಚಾ ರಿಯಾಝ್ ಕಡಂಬು ವಿರುದ್ಧ ದೂರು ದಾಖಲಿಸಿದೆ.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಅಶ್ರಿತ್ ನೊಂಡ, ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಸಂಜಿತ್ ಶೆಟ್ಟಿ, ಯುವ ಮೋರ್ಚಾ ಉತ್ತರ ಮಂಡಲ ಅಧ್ಯಕ್ಷರಾದ ರಕ್ಷಿತ್ ಆರ್. ಪೂಜಾರಿ, ಪ್ರಧಾನ ಕಾರ್ಯದರ್ಶಿ ಸಾಕ್ಷಾತ್ ಶೆಟ್ಟಿ, ಯಶ್ಪಾಲ್ ಸಾಲ್ಯಾನ್, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಪ್ರಕರಣ ಏನು?
ಅಡ್ಡೂರು ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿ ಮಾಡಿ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡು ಬಿಜೆಪಿ ಶಾಸಕ ಭರತ್ ಶೆಟ್ಟಿಯ ವಿರುದ್ಧ ಎಸ್.ಡಿ. ಪಿ.ಐ ಗುರುಪುರ ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷರಾದ ಅಶ್ರಫ್ ಕೈಕಂಬ ನೇತೃತ್ವದಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತು.