ಮಂಗಳೂರು: ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ಗೆ 3 ತಿಂಗಳು ಜೈಲು ಶಿಕ್ಷೆ, 40.20 ಲಕ್ಷ ರೂ. ದಂಡ
ಕನ್ನಡ ಸಿನಿಮಾ, ಧಾರಾವಾಹಿಗಳಲ್ಲಿ ಮಿಂಚಿದ ನಟಿ ಪದ್ಮಜಾ ರಾವ್ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದೆ. ಹಾಗೂ 40.20 ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶ ನೀಡಿದೆ. ಚೆಕ್ ಬೌನ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಈ ಆದೇಶವನ್ನು ನೀಡಲಾಗಿದೆ. 2020ರ ಜೂನ್ 17ರಂದು ಮಂಗಳೂರಿನ ವೀರೂ ಟಾಕೀಸ್’ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಅವರ ಬಳಿ ಪದ್ಮಜಾ ರಾವ್ ಅವರು 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದರು.
ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ. ಹೀಗಾಗಿ, ವಿರೇಂದ್ರ ಶೆಟ್ಟಿ ಅವರು ನ್ಯಾಯಾಲಯದ ಮೊರೆ ಹೊಗಿದ್ದರು. ಈ ಮೊದಲು ವಿಚಾರಣೆಗೆ ಹಾಜರಾದ ಪದ್ಮಜಾ ರಾವ್ ನಾನು ಯಾರಿಂದಲ್ಲೂ ಸಾಲ ಪಡೆದಿಲ್ಲ. ಹಾಗೂ ಯಾವುದೇ ಚೆಕ್ ನೀಡಿಲ್ಲ ಎಂದು ಹೇಳಿದರು. ನನ್ನ ಸಹಿಯನ್ನು ಕದ್ದು ಹಾಕಿದ್ದಾರೆ ಎಂದು ಆರೋಪಿಸಿದರು. ಆದರೆ ಈ ಬಗ್ಗೆ ಸರ್ಕಾರಕ್ಕೆ ಸಾಕ್ಷಿ ನೀಡಲು ಪದ್ಮಜಾ ವಿಫಲರಾಗಿದ್ದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆದೇಶ ನೀಡಿದ ಕೋರ್ಟ್ ಪದ್ಮಜಾ ರಾವ್ ಅವರು 40.20ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಿದೆ. ಇದರಲ್ಲಿ 40.17 ಲಕ್ಷ ರೂಪಾಯಿ ಹಣವನ್ನು ದೂರುದಾರನಿಗೆ ಕೊಡಬೇಕಿದೆ. ಉಳಿದ 3 ಸಾವಿರ ರೂಪಾಯಿ ಹಣವನ್ನು ಅವರು ಸರ್ಕಾರಕ್ಕೆ ತುಂಬಬೇಕು. ಉಳಿದಂತೆ ಸಾದಾ ಕಾರಗೃಹ ಶಿಕ್ಷೆ ಅನುಭವಿಸಬೇಕು ಎಂದು ಹೇಳಲಾಗಿದೆ.