ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ
ಬಂಟ್ವಾಳ: ಇಲ್ಲಿನ ಪುರಸಭೆಯ ನೂತನ ಅಧ್ಯಕ್ಷ ವಾಸುಪೂಜಾರಿ ಲೊರೆಟ್ಟೋ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.ನಿಕಟಪೂರ್ವ ಅಧ್ಯಕ್ಷ ಮಹಮ್ಮದ್ ಶರೀಫ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.
ಈಸಂದರ್ಭ ಉಪಸ್ಥಿತರಿದ್ದ ಮಾಜಿ ಸಚವ ರಮಾನಾಥ ರೈ ಅವರು ಶುಭಹಾರೈಸಿ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡುನಗರದ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.ಬಂಟ್ಚಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿಕುಂದರ್, ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ,ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ .ರೋಡ್ರಿಗಸ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ,ನಿಕಟಪೂರ್ವ ಅಧ್ಯಕ್ಷ ಸುದೀಪ್ ಕುಮಾರ್ ರೈ, ಪುರಸಭೆಯ ನಿಕಟಪೂರ್ವ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ,ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಪದ್ಮಶೇಖರ ಜೈನ್, ಬಂಟ್ಚಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ,ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವಪೂಜಾರಿ ಬೊಳ್ಳಾಯಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸುಧಾಕರ ಶೆಣೈ ಖಂಡಿಗ,ಪ್ರಮುಖರಾದ ಮಹಾಬಲ ಬಂಗೇರ,ಬಂಟ್ವಾಳ,ಮನೋಹರ ನೇರಂಬೋಳು, ಅಮ್ಮು ಅರ್ಬಿಗುಡ್ಡೆ,ಜಗನ್ನಾಥ ತುಂಬೆ,ಇಬ್ರಾಹಿಂ ನವಾಜ್, ದೇವಪ್ಪ ಕುಲಾಲ್, ಪುರಸಭಾ ಸದಸ್ಯರು,ನಾಮನಿರ್ದೇಶಿತ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.