ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ಬಂಟ್ವಾಳದ ಭರತ್ ಸೇರಿ ಮೂವರ ಬಂಧನ
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಒಂದು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಮಾಡಿದವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಸಿಸಿ ಟಿವಿ ದೃಶ್ಯ ಆಧಾರದ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಮಂಗಳೂರು ದಕ್ಷಿಣ ಪೊಲೀಸರು 3 ಜನರನ್ನು ಬಂಧಿಸಿದ್ದಾರೆ.
ಐವನ್ ಡಿಸೋಜಾ ರಾಜ್ಯಪಾಲರ ವಿರುದ್ಧವಾಗಿ ಭಾಷಣ ಮಾಡಿದಕ್ಕೆ ಕೋಪಕ್ಕಾಗಿ ಈ ಕಲ್ಲು ತೂರಾಟ ನಡೆಸಲಾಗಿದೆ. ಭರತ್, ಯಕ್ಷಿತ್, ದಿನೇಶ್ ಕುರ್ತಮೊಗೆರು ಎಂಬ ಮೂವರನ್ನು ಬಂಧಿಸಲಾಗಿದೆ.
ಇನ್ನು ಈ ಪ್ರಕರಣಕ್ಕೆ ಭಾಗಿಯಾಗಿರುವ ಭರತ್ ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ರಾಘವ ಭಂಡಾರಿ ಎಂಬವರ ಪುತ್ರ ಹಾಗೂ ಈಗಾಗಲೇ ಇತನ ಮೇಲೆ ಮೂರು ಹಲ್ಲೆ ಪ್ರಕರಣಗಳು ದಾಖಲಾಗಿದೆ. ಎರಡನೇ ಆರೋಪಿ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಆನಂದ ಪೂಜಾರಿ ಎಂಬವರ ಪುತ್ರ ದಿನೇಶ್, ಇತ ಕನ್ಯಾನದಲ್ಲಿ ಫೈನಾನ್ಸ್ ವಸೂಲಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.