ವಿಶ್ವ ಹಿಂದೂ ಪರಿಷತ್ತಿನ ಷಷ್ಠಿಪೂರ್ತಿ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
ಕುಪ್ಪೆಪದವು: ಮಿಜಾರು ಶಾಸ್ತಾವು ಭೂತನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸೆಪ್ಟೆಂಬರ್ 1ರ ಭಾನುವಾರ ವಿಶ್ವಹಿಂದೂ ಪರಿಷತ್ ಗುರುಪುರ ಪ್ರಖಂಡದ ವತಿಯಿಂದ ನಡೆಯಲಿರುವ ವಿಶ್ವ ಹಿಂದೂ ಪರಿಷತ್ತಿನ ಷಷ್ಠಿಪೂರ್ತಿ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಸೋಮವಾರ ಗಂಜಿಮಠ ಗಣಪತಿ ದೇವಸ್ಥಾನದಲ್ಲಿ ನೆರವೇರಿತು.
ವಿಶ್ವ ಹಿಂದೂ ಪರಿಷತ್ತಿನ ಹಿರಿಯ ಕಾರ್ಯಕರ್ತರಾದ ಪದ್ಮನಾಭ ಸಾಲ್ಯನ್ ಪದ್ಮಜೆ ಹೌಸ್ ಮೊಗರು, ಉದ್ಯಮಿ ಚಂದ್ರಹಾಸ ಶೆಟ್ಟಿ ನಾರಳ, ಹಾಗೂ ವಿಶ್ವ ಹಿಂದೂ ಪರಿಷತ್ತಿನ ಪ್ರಖಂಡ ಪ್ರಮುಖರು ಕಾರ್ಯಕರ್ತರು ಇದ್ದರು. ಕಳೆದ 60 ವರ್ಷಗಳಲ್ಲಿ ಜಗತ್ತಿನ ಹಿಂದುಗಳನ್ನು ಸಂಘಟಿಸುವ ಕಾರ್ಯದೊಂದಿಗೆ ಹಿಂದೂ ಧರ್ಮದ ಆಚರಣೆ, ಪ್ರಚಾರ, ರಕ್ಷಣೆಯ ಉದ್ದೇಶವನ್ನು ಇಟ್ಟುಕೊಂಡು, ಕೆಲಸಕಾರ್ಯಗಳನ್ನು ಮಾಡುತ್ತ ಬಂದಿರುವ ಸಂಘಟನೆಗೆ ಷಷ್ಠಿಪೂರ್ತಿ ಕಾರ್ಯಕ್ರಮವನ್ನು ದೇಶದ ಅನೇಕ ಭಾಗದಲ್ಲಿ ನಡೆಯುತ್ತಿದೆ.
ಆಗಸ್ಟ್ 25ರಿಂದ ಸೆಪ್ಟೆಂಬರ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 21 ಪ್ರಖಂಡಗಳಲ್ಲಿ ಹಿಂದೂ ಸಮಾವೇಶ, ಸಮ್ಮೇಳನ, ಶೋಭಾಯಾತ್ರೆ ಮೆರವಣಿಗೆ, ಕ್ರೀಡಾಕೂಟಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.