Published On: Thu, Aug 29th, 2024

ಮುಡಾ ಪ್ರಕರಣ: ವಿಚಾರಣೆಯನ್ನು ಆ.31ಕ್ಕೆ ಮುಂದೂಡಿದ ಹೈಕೋರ್ಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 2 ದಿನಗಳ ರಿಲೀಫ್​​ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್​ ವಿಚಾರಣೆ ನಡೆಸಿತ್ತು. ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ ವಾದ ಮಂಡಿಸಿದ್ದು, ರಾಜ್ಯಪಾಲರ ಪರ ವಕೀಲ ತುಷಾರ್ ಮೆಹ್ತಾ ಅವರು ಶನಿವಾರ ವಾದ ಮಂಡಿಸುವುದಾಗಿ ಕೋರ್ಟ್​ಗೆ ತಿಳಿಸಿದರು.

ಇದಕ್ಕೆ ಕೋರ್ಟ್​ ಸಹ ಒಪ್ಪಿಗೆ ನೀಡಿದೆ. ಇದರೊಂದಿಗೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೋರ್ಟ್, ಆಗಸ್ಟ್ 31 ಬೆಳಗ್ಗೆ 10:30ಕ್ಕೆ ಮುಂದೂಡಿದೆ.

ಈ ಹಿಂದೆ ನೀಡಿದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ಇನ್ನು ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೂ ಸಹ ಸೂಚನೆ ನೀಡಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter