Published On: Thu, Aug 29th, 2024

ಅಕ್ರಮ ಆಸ್ತಿ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್​

ಇಂದು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ವಿಚಾರಣೆ ಕೂಡ ಹೈಕೋರ್ಟ್​​​ನಲ್ಲಿ ನಡೆಸಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.ರಾಜ್ಯ ಸರ್ಕಾರ, ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಸೂಕ್ತ. ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿ . ಕೆ.ಸೋಮಶೇಖರ್, ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ.

ಇನ್ನು ಈ ಪ್ರಕರಣವನ್ನು ಸುಪ್ರೀಂ ಕೋರ್ಟ್​​​ ವಿಚಾರಣೆ ನಡೆಸುವುದು ಸೂಕ್ತ . ಹೀಗಾಗಿ ಅಂತಿಮವಾಗಿ ಸುಪ್ರೀಂಕೋರ್ಟ್ ಈ ಬಗ್ಗೆ ತೀರ್ಮಾನಿಸಬೇಕಿದೆ ಎಂದು ಹೇಳಿದೆ. ಯತ್ನಾಳ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್, ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂಕೋರ್ಟ್‌ಗೆ ಹೋಗಲಿದೆ. ಸಿಬಿಐ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ತನಕ ಡಿಕೆ ಶಿವಕುಮಾರ್​ ರಿಲೀಫ್ ಎಂದು ಹೇಳಲಾಗಿದೆ.

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಎರಡೂ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​​ ವಿಭಾಗೀಯ ಪೀಠ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಇದೀಗ ಇಂದು ವಿಚಾರಣೆ ನಡೆಸಿ, ಇದನ್ನು ಸುಪ್ರೀಂ ಕೋರ್ಟ್​​ಗೆ ವಹಿಸುವುದು ಸೂಕ್ತ ಎಂದು ಹೇಳಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter