ಆಗಸ್ಟ್ 29 ರಿಂದ 31 ರವರೆಗೆ ಕರಾವಳಿಯ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಮಳೆ ದಾಖಲಾಗಿದೆ. ಮಂಗಳೂರು ನಗರದಲ್ಲಿ ಮಧ್ಯಾಹ್ನ ಮತ್ತು ಸಂಜೆ ಮಳೆಯಾಗಿದ್ದು, ಬಹುತೇಕ ದಿನ ಮೋಡ ಕವಿದ ವಾತಾವರಣವಿತ್ತು.

ಬಂಟ್ವಾಳ, ಸುಳ್ಯ, ಕಡಬ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಿದ್ದು, ಬೆಳ್ತಂಗಡಿ ಮತ್ತು ಪುತ್ತೂರಿನ ವಿವಿಧೆಡೆ ಬುಧವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ. ಇನ್ನುಳಿದಂತೆ ಉಡುಪಿಯಲ್ಲಿ ಬುಧವಾರ ಸಾಧಾರಣ ಮಳೆಯಾಗಿದ್ದು, ಕಾರ್ಕಳ, ಬೈಂದೂರು, ಕುಂದಾಪುರ, ಉಡುಪಿ, ಕಾಪು, ಹೆಬ್ರಿ, ಬ್ರಹ್ಮಾವರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ತುಂತುರು ಮಳೆ ಬಿದ್ದಿದೆ. ಉಡುಪಿ ಮತ್ತು ಮಣಿಪಾಲದಲ್ಲಿ ಸಂಜೆ ಮತ್ತು ರಾತ್ರಿ ಗಾಳಿ ಸಹಿತ ಭಾರಿ ಮಳೆಯಾಗಿದೆ.

By suddi9

Leave a Reply

Your email address will not be published. Required fields are marked *