ಮೊಸರು ಕುಡಿಕೆ ಉತ್ಸವದಿಂದ ಜೀವನದ ಪಾಠವನ್ನು ಕಲಿಯಲು ಸಾಧ್ಯ: ರಮಾನಾಥ ರೈ
ಬಂಟ್ವಾಳ: ಸೌಹಾರ್ದತೆಯ ಸಂಕೇತವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದಿಂದ ನಾವು ಜೀವನದ ಪಾಠವನ್ನು ಕಲಿಯಲು ಸಾಧ್ಯ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.ಮಾಣಿ ಯುವಕ ಮಂಡಲದ ವತಿಯಿಂದ ಮಾಣಿಯ ಗಾಂಧಿ ಮೈದಾನದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು ಮೊಸರು ಕುಡಿಕೆ ಉತ್ಸವವನ್ನು ಉದ್ಘಾಟಿಸಿದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಬೆಗುತ್ತು ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಅವರು ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.

ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕರಿಕ್ಕಳ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗಫೂರ್, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು, ಮಾಣಿ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಬರಿಮಾರು ವಲಯ ಕಾಂಗ್ರೆಸ್ಸಿನ ಅಧ್ಯಕ್ಷ ಅಶೋಕ್ ಪೂಜಾರಿ ಮತ್ತಿತರರು ವೇದಿಕೆಯಲ್ಲಿದ್ದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಂಬಳ ಕೋಣಗಳ ಯಜಮಾನ ಉಮೇಶ್ ಶೆಟ್ಟಿ ಸಾಗು ಹೊಸಮನೆ ಮತ್ತು ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ನ ತೀರ್ಪುಗಾರ ಮೂಸಾ ಕರೀಂ ಇವರನ್ನು ಸನ್ಮಾನಿಸಲಾಯಿತು.
ಯುವಕ ಮಂಡಲದ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಸಾಗು, ಕಾರ್ಯದರ್ಶಿ ಜಗದೀಶ್ ಜೈನ್, ಕೋಶಾಧಿಕಾರಿ ನಾಗರಾಜ ಪೂಜಾರಿ, ಕ್ರೀಡಾ ಕಾರ್ಯದರ್ಶಿ ದಯಾನಂದ ಪೂಜಾರಿ, ಸದಸ್ಯರಾದ ಹರೀಶ್ ಶೆಟ್ಟಿ ಸಾಗು, ವಿಕೇಶ್ ಶೆಟ್ಟಿ, ಮಹಮ್ಮದ್ ಹಬೀಬ್, ಗಿರೀಶ್ ಪೂಜಾರಿ, ಅಬ್ದುಲ್ ಮಜೀದ್, ಹರೀಶ್ ಮಾಣಿ, ಪ್ರಕಾಶ್ ಮಾಣಿ, ಅಶ್ರಫ್, ಜಗದೀಶ್ ಪೂಜಾರಿ, ಅಝೀಝ್ ಹಳಿರ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ರಾಜರಾಜೇಶ್ವರಿ ಭಜನಾ ಮಾಣಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮಾಣಿ ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ವಂದಿಸಿದರು.