ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಹಾಕಿಕೊಂಡು ಫೋಟೋಶೂಟ್ ಮಾಡಿಸಿದ ಯುವತಿ

ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬಳು ಬಿಕಿನಿ ಹಾಕಿಕೊಂಡು ಫೋಟೋಶೂಟ್ ಮಾಡಿಸಿಕೊಂಡಿದ್ದಾಳೆ. ಇದೀಗ ಈ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಬಿಕಿನಿ ಹಾಕಿಕೊಂಡ ಫೋಟೋಶೂಟ್ ಮಾಡಿರುವ ಬಗ್ಗೆ ಯುವತಿ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಗಳ ಸಹಿತ ಮಾಹಿತಿ ನೀಡಿದ್ದಾಳೆ.
ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವ ಹಂಚಿಕೊಂಡ ಈ ಮಾಡೆಲ್ ಹಂಚಿಕೊಂಡಿದ್ದಾಳೆ. ಇನ್ನು ಬಟ್ಟೆ ಬದಲಿಸುವಂತೆ ಪೊಲೀಸರು ಕೂಡ ಆಕೆಗೆ ಸೂಚಿಸಿದ್ದಾರೆ ಎಂದು ತನ್ನ ಫೋಸ್ಟ್ನಲ್ಲಿ ಹಂಚಿಕೊಂಡಿದ್ದಾಳೆ. ಇದರ ಜತೆಗೆ ಹೀಗೆ ಹೋದರೆ ಸ್ಥಳೀಯರು ಹಲ್ಲೆ ನಡೆಸುತ್ತಾರೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾಳೆ.
ಇನ್ನು ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು ಎಂದು ಮಾಡೆಲ್ ಪ್ರಶ್ನೆ ಮಾಡಿದ್ದಾಳೆ. ಬೀಚ್ ಸಾರ್ವಜನಿಕ ಪ್ರದೇಶ ಫೋಟೋಶೂಟ್ ಮಾಡಿಕೊಂಡರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೋಶೂಟ್ ಮಾಡುವುದು ಕಾನೂನು ಉಲ್ಲಂಘನೆಯೇ? ಎಂದು ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಪೊಲೀಸರಿಗೆ ಯುವತಿಯ ಪ್ರಶ್ನೆ ಮಾಡಿದ್ದಾಳೆ.