ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಬಂಟ್ವಾಳ ಎಸ್ ವಿ.ಎಸ್ ಪ.ಪೂ.ಕಾಲೇಜ್ ಪ್ರಥಮ
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪ. ಪೂ.) ದಕ್ಷಿಣ ಕನ್ನಡ ಜಿಲ್ಲೆಯ ಆಶ್ರಯದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಬಂಟ್ವಾಳ ಇಲ್ಲಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ

ಈ ಪಂದ್ಯಾಟದಲ್ಲಿ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ವಿಜೇತರಿಗೆ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೂಡಿಗೆ ಪಾಂಡುರಂಗ ಶೆಣೈ, ಕಾರ್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್, ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಸಂಚಾಲಕರಾದ ಕೆ. ರೇಖಾ ಶೆಣೈ, ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
