ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡದಿಂದ ಜೀವರಕ್ಷಣಾ ಕೌಶಲ್ಯ ಕುರಿತ ತರಬೇತಿ ಕಾರ್ಯಗಾರ
ಬಂಟ್ವಾಳ : ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ಕೆಲಸವು ಸೇವೆಯ ರೂಪದಲ್ಲಿ ಗುರುತಿಸಲ್ಪಡುತ್ತದೆ. ತುರ್ತು ಸಂದರ್ಭದಲ್ಲಿ ನೆರವಾಗುವ ಅತಿ ಚಿಕ್ಕ ವಿಚಾರವೂ ಹೆಚ್ಚಿನ ಮಹತ್ವವನ್ನು ಪಡೆದಿರುತ್ತದೆ ಎಂದುರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಮಾಂಡರ್ ಶಾಂತಿ ಲಾಲ್ ಜಟಿಯ ಹೇಳಿದರು.
ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕವಿಭಾಗದ ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರಿಗೆ ನಡೆದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಗ್ರಾಮಾಭಿವೃದ್ದಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ್ ಕುಲಾಲ್ ಕಾರ್ಯಾಗಾರವನ್ನು ಉದ್ಘಾಟಿಸಿ, ಶೌರ್ಯ ತಂಡದ ಸದಸ್ಯರುಗಳಿಗೆ ತಮ್ಮನ್ನು ರಕ್ಷಿಸಿಕೊಂಡು ತುತ್ತು ಸಂದರ್ಭಗಳಲ್ಲಿ ವಿಪತ್ತುಗಳನ್ನು ನಿರ್ವಹಣೆ ಮಾಡುವ ಸಲುವಾಗಿಯೇ ನುರಿತ ಏನ್ ಡಿ ಆರ್ ಎಫ್ ತಂಡದಿಂದ ತರಬೇತಿ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೌರ್ಯ ಸಮಿತಿಯ ಮಾಸ್ಟರ್ ಪ್ರಕಾಶ್ ವಹಿಸಿದ್ದರು.
ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಯವರಾದ ವಿಜಯ್ ಕುಮಾರ್ ರವರು ವಿಪತ್ತಿನ ವಿಧಗಳು ಮತ್ತು ಅವುಗಳನ್ನು ತಡೆಗಟ್ಟುವ ವಿಧಾನದ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡದಿಂದ ಜೀವರಕ್ಷಣಾ ಕೌಶಲ್ಯ ಕುರಿತು ಸ್ವಯಂ ಸೇವಕರಿಗೆ ತರಬೇತಿಯನ್ನು ನೀಡಲಾಯಿತಲ್ಲದೆ
ಹೊಸದಾಗಿ ಸೇರ್ಪಡೆಯಾದ ಶೌರ್ಯ ಸ್ವಯಂ ಸೇವಕರಿಗೆ ಸಮವಸ್ತ್ರವನ್ನು ವಿತರಿಸಲಾಯಿತು
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಬ್ ಇನ್ಸ್ ಪೆಕ್ಟರ್ ಮುನಿಕೃಷ್ಣ, ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ, ಜನಜಾಗೃತಿ ವೇದಿಕೆ ಆಡಳಿತ ಯೋಜನಾಧಿಕಾರಿ ಮಾಧವ ಗೌಡ ಉಪಸ್ಥಿತರಿದ್ದರು.
ರೇಖಾ ಪ್ರವೀಣ್ ಪ್ರಾರ್ಥಿಸಿ,ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಎಮ್ ಪ್ರಸ್ತಾವಿಸಿ ಸ್ವಾಗತಿಸಿದರು, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕರಾಕ ನಿತೇಶ್ ಕೆ ಕಾರ್ಯಕ್ರಮ ನಿರೂಪಿಸಿದರು.