ಬಂಟ್ವಾಳ: ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ೨೦೨೪-೨೦೨೫ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಚೆಂಡೆ ಬಾರಿಸುವ ಮೂಲಕ ಪ್ರದೀಪ್ತ ಸಾಂಸ್ಕೃತಿಕ ಸಂಘದ ಉದ್ಘಾಟನೆಯನ್ನು ನೆರವೇರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳ ತಂಡದಿಂದ ಚೆಂಡೆ ಹಾಗೂ ವಿದ್ಯಾರ್ಥಿನಿಯರ ತಂಡಗಳಿಂದ ನೃತ್ಯ ಪ್ರದರ್ಶನಗಳು ನಡೆದವು. ಕು. ಶರಣ್ಯ ಶ್ರೀ ವೈಯಕ್ತಿಕ ಗೀತೆ ಹಾಡಿದರು. ವಿದ್ಯಾರ್ಥಿನಿ ಕು. ಸ್ವಾತಿ ಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿ, ಕು. ಪುನೀತಾ ಸ್ವಾಗತಿಸಿ, ಕು.ಧನ್ಯಶ್ರೀ ವಂದಿಸಿದರು.