ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ನೂತನ ಅಧ್ಯಕ್ಷ ಸಹಿತ ಸಮಿತಿ ಸದಸ್ಯರ ಪದಗ್ರಹಣ
ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ನೂತನ ಅಧ್ಯಕ್ಷ ಸುಧಾಕರ ಶೆಣೈ ಖಂಡಿಗ ಸಹಿತ ಸಮಿತಿ ಸದಸ್ಯರ ಪದಗ್ರಹಣ ಸಮಾರಂಭವು ಪಾಣೆಮಂಗಳೂರಿನ ಸಾಗರ ಅಡಿಟೋರಿಯಂನಲ್ಲಿ ನಡೆಯಿತು.ಮಾಜಿ ಸಚಿವ ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ,ಕಿಸಾನ್ ಘಟಕದ ನೂತನ ಅಧ್ಯಕ್ಷ ಸುಧಾಕರ ಶೆಣೈ ಖಂಡಿಗ ಮತ್ತು ಸದಸ್ಯರಿಗೆ ಶುಭಹಾರೈಸಿದರು.
ವಿಧಾನಪರಿಷತ್ ಸದಸ್ಯ,ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ,ಪಕ್ಷದ ಮುಂಚೂಣಿ ಸಹಿತ ವಿವಿಧ ಎಲ್ಲಾ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಿಸಿಕೊಂಡು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಪಕ್ಷ ಬೂತ್ ಮಟ್ಟದಿಂದ ಬಲಿಷ್ಠಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸಭಾಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪೂಜಾರಿ, ಜಿ.ಎ.ಭಾವ ಮಾತನಾಡಿ ಶುಭಹಾರೈಸಿದರು.
ಬಂಟ್ವಾಳ ಪುರಸಭಾಧ್ಯಕ್ಷ ವಾಸುಪೂಜಾರಿ ಲೊರೆಟ್ಟೋ,ಬಂಟ್ವಾಳ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿಕುಂದರ್,
ಗೇರು ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್,ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್ ,ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್,,ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ,ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ವಿಲ್ಮಾ ಮೋರಸ್, ಪಕ್ಷದ ಪ್ರಮುಖರಾದ ಅಬ್ಬಾಸ್ ಆಲಿ,ಪದ್ಮನಾಭ ರೈ,ಮೋಹನ್ ಗೌಡಕಲ್ಮಂಜ,ಸುಭಾಶ್ಚಂದ್ರ ಶೆಟ್ಟಿ,ಸುಹಾನ್ ಆಳ್ವ,ಚಿತ್ತರಂಜನ್ ಶೆಟ್ಟಿ ಬೊಂಡಾಲ,ಸುರೇಶ್ ಜೋರ,ಇಬ್ರಾಹಂ ನವಾಜ್,ಸುದರ್ಶನ್ ಜೈನ್ ಮೊದಲಾದವರಿದ್ದರು.
ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರುಗಳಾದ ಚಂದ್ರಶೇಖರ ಭಂಡಾರಿ ಮತ್ತು ಬಾಲಕೃಷ್ಣ ಆರ್ ಅಂಚನ್,ಪಾಣೆಮಂಗಳೂರು ಬ್ಲಾಕ್ ನ ನಿಕಟಪೂರ್ವ ಅಧ್ಯಕ್ಷ ಸುದೀಪ್ ಕುಮಾರ್
,ಕಾರ್ಮಿಕ ಘಟಕದ ಅಧ್ಯಕ್ಷ ಚಂದ್ರಶೇಖರ ಆಚಾರ್ಯ, ಎನ್ ಎಸ್ ಯು ಐ ಘಟಕದ ಅಧ್ಯಕ್ಷ ಮಹಮ್ಮದ್ ಸಪ್ವಾನ್ ಸರವು ಉಪಸ್ಥಿತರಿದ್ದರು.