ಬಂಟ್ವಾಳ: ಟ್ರಕ್-ಕಾರು ನಡುವೆ ಅಪಘಾತ; ಓರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಟ್ರಕ್ ಹಾಗೂ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮುಸ್ತಾಫ ಎಂಬವರಿಗೆ ಗಂಭೀರ ಗಾಯವಾಗಿದೆ.
ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿ ಮುಸ್ತಫಾ ಅವರಿಗೆ ಗಂಭೀರ ಗಾಯಗಳಾಗಿವೆ.
ಗಂಭೀರ ಗಾಯಗೊಂಡ ವ್ಯಕ್ತಿ ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಎಂದು ಗುರುತಿಸಲಾಗಿದೆ.
ತೀವ್ರ ಸ್ವರೂಪದ ಗಾಯವಾಗಿರುವ ಮುಸ್ತಾಫ ಅವರಿಗೆ ಬಂಟ್ವಾಳದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಗಾಯಾಳು ಮುಸ್ತಾಫ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.